ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ ಹೆಣ್ಣು ಹುಲಿಯನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.
ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಹುಲಿ ಪದೇ ಪದೇ ಕಾಣಿಸಿಕೊಳ್ಳುತ್ತಾ ಆತಂಕ ಸೃಷ್ಟಿಸಿತ್ತು.
ಜೊತೆಗೆ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿ ಆ ಭಾಗದಲ್ಲಿ ವಾಸಿಸುತ್ತಿರುವ ಜನರಲ್ಲಿ ಭೀತಿ ಉಂಟುಮಾಡಿತ್ತು.
ಹುಲಿಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 11 ವರ್ಷದ ಹೆಣ್ಣು ಹುಲಿಯನ್ನು ಸೆರೆ ಹಿಡಿದು ಕಾಡಿಗೆ ರವಾನಿಸಿದ್ದಾರೆ.
