ಕರಡಿಗಳ‌ ಸಾವಿಗೆ‌ ಅರಣ್ಯ ಇಲಾಖೆಯವರ ನಿರ್ಲಕ್ಷ್ಯಕಾರಣ‌:ತೇಜಸ್ವಿ

Spread the love

ಮೈಸೂರು: ಅರಸೀಕೆರೆಯ ಕಲ್ಲುಸದರ ಹಳ್ಳಿ ಬಳಿ ಕರೆಂಟ್ ತಗುಲಿ ಮೂರು ಕರಡಿಗಳು ಮೃತಪಟ್ಟಿರುವುದಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷ್ಯಕಾರಣ‌ ಎಂದು ಕನ್ನಡ ಚಳವಳಿ ಹೋರಾಟಗಾರ ತೇಜಸ್ವಿ ನಾಗಲಿಂಗಸ್ವಾಮಿ ಆರೋಪಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಅನಾರೋಗ್ಯದಿಂದ ಆನೆ ಮೃತಪಟ್ಟಿತ್ತು, ಈ ಘಟನೆ ಮಾಸುವ ಮುನ್ನವೇ ಅರಣ್ಯ ಇಲಾಖೆಯ ಬೇಜವಾಬ್ದಾರಿಯಿಂದ ಇದೇ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕಲ್ಲುಸದರ ಹಳ್ಳಿಯ ಅರಣ್ಯ ಅಂಚಿನಲ್ಲಿ ಇಂದು ಬೆಳಿಗ್ಗೆ ವಿದ್ಯುತ್ ತಂತಿ ತಗುಲಿ ಮೂರು ಕರಡಿಗಳು ಸಾವನ್ನಪ್ಪಿವೆ.ವಿಷಯ ತಿಳಿದು ತೀವ್ರ ಬೇಸರ ಉಂಟಾಗಿದೆ ಎಂದು ತಿಳಿಸಿದ್ದಾರೆ.

ಕರಡಿಗಳ ಸಾವಿಗೆ ಅರಣ್ಯ ಇಲಾಖೆಯ ಅಧಿಕಾರಿಗಳೇ ಹೊಣೆ,ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಂಚಿನ ಪ್ರದೇಶಗಳಲ್ಲಿ ಗಸ್ತು ತಿರುಗಿ ವಿದ್ಯುತ್ ತಂತಿ ಅಥವಾ ಕಂದಕ ಇದ್ದಲ್ಲಿ ಸಂಬಂಧ ಪಟ್ಟವರಿಗೆ ತಿಳಿಸಿ ಸರಿಪಡಿಸಬೇಕು ಎಂದು ತೇಜಸ್ವಿ ಒತ್ತಾಯಿಸಿದ್ದಾರೆ.

ಮೂರು ಕರಡಿಗಳ ಸಾವಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಬೇಜವ್ದಾರಿ ಕಾರಣ,ಕೂಡಲೇ‌ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.