ಕೇರಳ/ತ್ರಿಶೂರ್: ದೇಶದಲ್ಲೇ ಪ್ರಸಿದ್ದವಾಗಿರುವ ತ್ರಿಶೂರ್ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿ13 ಮಂದಿ ಸುಟ್ಟುಹೋದ ಘನಘೋರ ಘಟನೆ ನಡೆದಿದೆ.
ತ್ರಿಶೂರ್ ನ ಮುಂಡತಿಕ್ಕೋಡ್ನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಮಂಗಳವಾರ ಭಾರಿ ಸ್ಫೋಟ ಸಂಭವಿಸಿ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ,
ಹಲವಾರು ಮಂದಿ ಗಾಯಗೊಂಡಿದ್ದಾರೆ.
ತ್ರಿಶೂರ್ ಪೂರಂ ಉತ್ಸವಕ್ಕೆ ಸಿದ್ಧತೆ ನಡೆಯುತ್ತಿದ್ದ ಸ್ಥಳದಲ್ಲಿ ಈ ದುರಂತ ಸಂಭವಿಸಿದೆ.
13 ಕಾರ್ಮಿಕರಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದು, ಅವರನ್ನು ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೇರಳಂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ
ರಕ್ಷಣಾ ಕಾರ್ಯಾಚರಣೆ ಕಷ್ಟಕರವಾಗಿದ್ದು, ದಟ್ಟ ಹೊಗೆಯಿಂದಾಗಿ ಅಗ್ನಿಶಾಮಕದಳ ಸಿಬ್ಬಂದಿಗೆ ಘಟಕದ ಒಳಗೆ ಹೋಗಲುಉ ಸಾಧ್ಯವಾಗಿರಲಿಲಲಲ್ಲ.
ಸ್ಪೋಟದ ತೀವ್ರತೆಗೆ ಕುಸಿದ ಗೋದಾಮಿನ ಅವಶೇಷಗಳ ಅಡಿಯಲ್ಲಿ ಇನ್ನೂ ಹಲವಾರು ಕಾರ್ಮಿಕರು ಸಿಲುಕಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಆ ಗೋದಾಮಿನಲ್ಲಿ ಉತ್ಸವದಲ್ಲಿ ಪಟಾಕಿ ಪ್ರದರ್ಶನಗಳಿಗಾಗಿ ಬೃಹತ್ ಪ್ರಮಾಣದ ಗನ್ಪೌಡರ್ ಸಂಗ್ರಹಿಸಿಡಲಾಗಿತ್ತು ಎಂದು ತಿಳಿದು ಬಂದಿದೆ.
ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವು ಒದಗಿಸುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪೊಲೀಸ್, ಅಗ್ನಿಶಾಮಕ, ಆರೋಗ್ಯ, ಕಂದಾಯ ಮತ್ತು ವಿಪತ್ತು ನಿರ್ವಹಣೆ ಸೇರಿದಂತೆ ಎಲ್ಲಾ ಇಲಾಖೆಗಳನ್ನು ರಕ್ಷಣಾ ಪ್ರಯತ್ನಗಳಿಗಾಗಿ ಸಮನ್ವಯಗೊಳಿಸಲಾಗಿದೆ ಮತ್ತು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ವಿಶೇಷ ಕಾರ್ಯವಿಧಾನವನ್ನು ಸ್ಥಾಪಿಸಲಾಗಿದೆ.
ಜೀವಹಾನಿಗೆ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದಾರೆ. ಬಿಕ್ಕಟ್ಟನ್ನು ನಿರ್ವಹಿಸಲು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೆಚ್ಚುವರಿ 108 ಆಂಬ್ಯುಲೆನ್ಸ್ಗಳು ಸೇರಿದಂತೆ ವಿಶೇಷ ವೈದ್ಯಕೀಯ ಸೌಲಭ್ಯಗಳಿಗೆ ಆದೇಶಿಸಿದ್ದಾರೆ.
ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಸ್ಪೋಟಕ್ಕೆ ಕಾರಣ ತಿಳಿದುಬಂದಿಲ್ಲ.
