ಮೈಸೂರು: ಮೈಸೂರಿನ ಒಂದು ಹೆಜ್ಜೆ ರಕ್ತದಾನಿ ಬಳಗದ ಅಧ್ಯಕ್ಷರಾದ ರಕ್ತದಾನಿ ಮಂಜು ಅವರು ರಾಷ್ಟ್ರಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಥಾ ಬಿಂದು ಪ್ರಕಾಶನ ಮಂಗಳೂರು ಪ್ರದೀಪ್ ಕುಮಾರ್ ಸಾರಥ್ಯದಲ್ಲಿ ಮೇ 3 ರಂದು ಮಧ್ಯಾನ 2 ಗಂಟೆಗೆ ಮುಂಬೈನ ಮೈಸೂರ್ ಅಸೋಸಿಯೇಷನ್ ಮಾಟುಂಗ ಕನ್ನಡದ ಕಂಪು ಕಾರ್ಯಕ್ರಮದಲ್ಲಿ ಕೃತಿಗಳ ಅನಾವರಣ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಈ ಸಂದರ್ಭದಲ್ಲಿ ಮೈಸೂರಿನ ಒಂದು ಹೆಜ್ಜೆ ರಕ್ತದಾನಿ ಬಳಗದ ಅಧ್ಯಕ್ಷರಾದ ರಕ್ತದಾನಿ ಮಂಜು ಅವರ ಸುಧೀರ್ಘ ಸೇವೆಯನ್ನ ಗುರುತಿಸಿ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
