ಮೈಸೂರು: ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಕೇಂದ್ರ ಸರ್ಕಾರ ತಕ್ಷಣ ಜಾರಿಗೆ ತರಬೇಕು ಎಂದು ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ಒತ್ತಾಯಿಸಿದ್ದಾರೆ.
ನಾರಿಶಕ್ತಿ ವಂದನ್ ಮಸೂದೆಯ ಜೊತೆಗೆ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡನೆಯನ್ನೂ ಸೇರಿಸಿ ಮತ್ತೆ ತಿದ್ದುಪಡಿ ಮಸೂದೆ ಜಾರಿಗೆ ಯತ್ನಿಸಿದ್ದರಿಂದ ಮಸೂದೆಗೆ ಸೋಲುಂಟಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಮಹಿಳೆಯರ ಮೇಲೆ ನಿಜವಾದ ಕಾಳಜಿ ಇದ್ದರೆ, ಮಹಿಳಾ ಮೀಸಲಾತಿ ಮಸೂದೆಯನ್ನು ಪ್ರತ್ಯೇಕವಾಗಿ ಜಾರಿಗೊಳಿಸಲಿ ಎಂದು ಸವಾಲು ಹಾಕಿದ್ದಾರೆ.
ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಪುರುಷರಿಗೆ ಸರಿಸಮನಾಗಿ ಕೆಲಸ ಮಾಡುತ್ತಾರೆ. ಶೇ 33ರಷ್ಟು ಮೀಸಲಾತಿ ಕೊಟ್ಟರೂ ಅದು ಕಡಿಮೆ. ಹಾಗಾಗಿ, ಶೇ50ರಷ್ಟು ಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ರೇಖಾ ಒತ್ತಾಯಿಸಿದ್ದಾರೆ.
