ಮೈಸೂರು: ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥಮಾಡಿಕೊಳ್ಳಬೇಕಿತ್ತು ಎಂದು ಚಾಮರಾಜ ಕ್ಷೇತ್ರದ ಇಂದಿರಾ ಗಾಂಧಿ ಬ್ಲಾಕ್ ಅಧ್ಯಕ್ಷ ರವಿ ಮಂಚೇಗೌಡನ ಕೊಪ್ಪಲು ಅವರು ಹೇಳಿದ್ದಾರೆ.
ಈಗಾಗಲೇ ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು ಎಂದು ಅವರು
ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಅಡುಗೆ ಅನಿಲ ಸಿಲಿಂಡರ್ ಬೆಲೆ ಹಾಗೂ ಇತರೆ ಅಗತ್ಯ ಸೇವೆಗಳ ಬೆಲೆ ಏರಿಕೆ ಕುರಿತು ಪ್ರತಿಕ್ರಿಯೆ ಇಯಿಸಿರುವ ರವಿ ಮಂಚೇಗೌಡನ ಕೊಪ್ಪಲು, ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳದ ಹೊರೆ ಜನಸಾಮಾನ್ಯರ ಮೇಲೆಯೇ ಬೀಳುತ್ತದೆ. ಇದರಿಂದಾಗಿ ಅನೇಕ ಹೊಟೇಲ್ ಗಳು ಬಂದ್ ಆಗಿವೆ. ಇದರ ಬಗ್ಗೆ ಕೇಂದ್ರ ಸರ್ಕಾರ ಗಮನವಿಡಬೇಕಿತ್ತು ಎಂದಿದ್ದಾರೆ.
ಸರ್ಕಾರ ಜನರ ಮೇಲಿನ ಹೊರೆ ಇಳಿಸಬೇಕು. ಬೆಲೆ ಏರಿಕೆಯಿಲ್ಲದೇ ಜನಸಾಮಾನ್ಯ ನಿಶ್ಚಿಂತೆಯಿಂದ ಬದುಕುವ ದಾರಿಯನ್ನು ಕೇಂದ್ರ ಸರ್ಕಾರ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಯುದ್ಧ ನಡೆಯುತ್ತಿರುವ ಹೊತ್ತಿನಲ್ಲಿ ಅಂತರರಾಷ್ಟ್ರೀಯ ಸಂಬಂಧಗಳನ್ನು ಮಿತ್ರ ರಾಷ್ಟ್ರಗಳ ಜೊತೆ ಉಳಿಸಿಕೊಳ್ಳಬೇಕಿರುವುದು ಅತ್ಯವಶ್ಯ. ಅನೇಕ ದೇಶಗಳು ಭಾರತವನ್ನು ಹಲವಾರು ರೀತಿಯಲ್ಲಿ ಬೆಂಬಲಿಸಿವೆ. ನಮ್ಮ ವಿದೇಶಾಂಗ ನೀತಿ ವಿಫಲವಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಕೇಂದ್ರ ಸರ್ಕಾರ ಬೆಲೆ ಏರಿಕೆ ಮೂಲಕ ಬಡವರಿಗೆ ದ್ರೋಹ ಬಗೆಯುತ್ತಿದೆ. ಪಂಚರಾಜ್ಯ ಚುನಾವಣೆ ಮುಕ್ತಾಯವಾಗಲಿ ಎಂದು ಸರ್ಕಾರ ಕಾಯುತ್ತಿತ್ತು. ಸರ್ಕಾರದ ಈ ತೀರ್ಮಾನದಿಂದ ಹೊಟೇಲ್ಗಳು ಮುಚ್ಚುವ ಪರಿಸ್ಥಿತಿ ಬಂದಿದೆ. ಜನರಿಗೆ ಕೇಂದ್ರ ಸರ್ಕಾರ ಸೌಧೆ ಭಾಗ್ಯ ನೀಡಿದೆ. ಸೌದೆ ಒಲೆ ಕಡಿಮೆ ಮಾಡುತ್ತೇವೆ ಎಂದು ಉಜ್ವಲ ಯೋಜನೆ ಮೂಲಕ ಪ್ರಚಾರ ಪಡೆದರು. ಈಗ ಸುಮಾರು ಸಾವಿರ ರೂ. ದರ ಏರಿಕೆ ಮಾಡಿದ್ದು, ಜನ ಹೇಗೆ ಬದುಕಬೇಕು? ಈ ಕಾರಣಕ್ಕೆ ನಾವು ಐದು ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ನಮ್ಮ ರಾಜ್ಯದಲ್ಲಿ ಒಂದೂವರೆ ಕೋಟಿ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ಲಾಭ ಸಿಗುತ್ತಿವೆ ಎಂದು ರವಿ ಮಂಚೇಗೌಡನ ಕೊಪ್ಪಲು ತಿಳಿಸಿದ್ದಾರೆ.
