ಮೈಸೂರು: ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಹುಮತದಿಂದ ಗೆಲುವು ಸಾಧಿಸಿರುವುದು ಪಕ್ಷಕ್ಕೆ ಇನ್ನಷ್ಟು ಬಲ ಬಂದಿದೆ ಎಂದು ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್ ತಿಳಿಸಿದ್ದಾರೆ.
ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪೂಜೆ ಸಲ್ಲಿಸಿ ನಂತರ ಸಿಹಿ ವಿತರಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ವೇಳೆ ಅವರು ಮಾತನಾಡಿದರು.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಾಮ ಮಾರ್ಗದ ಮೂಲಕ ಚುನಾವಣೆ ತಂತ್ರ ಬಳಸಿ ಗೆಲ್ಲಲು ಪ್ರಯತ್ನಿಸಿದರು ಮತದಾರು ಗ್ಯಾರಂಟಿ ಯೋಜನೆಗಳನ್ನು ಮತ್ತು ಕಾಂಗ್ರೆಸ್ ಪಕ್ಷದ ನಾಯಕತ್ವವನ್ನು ಒಪ್ಪಿಕೊಂಡು ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಪಕ್ಷಕ್ಕೆ ಇನ್ನಷ್ಟು ಶಕ್ತಿ ತುಂಬಿದ್ದಾರೆ ಎಂದು ಹೇಳಿದರು.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಮೈಸೂರು ನಗರ ಜಿಲ್ಲಾ ಉಪಾಧ್ಯಕ್ಷರಾದ ರಾಮಪ್ಪ ರಮೇಶ್, ಅಖಿಲ ಕರ್ನಾಟಕ ಸಿದ್ದರಾಮಯ್ಯ ಬ್ರಿಗೇಡ್ ಅಧ್ಯಕ್ಷ ಹಿನಕಲ್ ಉದಯ್, ಲೋಕೇಶ್, ಕೃಷ್ಣಪ್ಪ (ಗಂಟಯ್ಯ), ದಿನೇಶ್, ಗುಂಡಪ್ಪ, ಕನಕ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ರವಿಚಂದ್ರ, ಎಸ್ ಎನ್ ರಾಜೇಶ್, ರಾಕೇಶ್, ನಿತಿನ್ ಮತ್ತಿತರರು ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.
