ಮೈಸೂರು: ಸ್ವಾಮಿ ವಿವೇಕಾನಂದರ ಜನ್ಮಭೂಮಿ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಧೂಳೀಪಟಗೊಳಿಸಿ ಬಿಜೆಪಿಗೆ ಬಹುಮತ ನೀಡಿದ ರಾಷ್ಟ್ರಭಕ್ತ ಸೇನಾನಿಗಳ ಕಾರ್ಯ ಶ್ಲಾಘನೀಯ ಎಂದು ಬಿಜೆಪಿ ಮುಖಂಡರಾದ ಡಾ. ಹೇಮ ನಂದೀಶ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಅವರು, 2028ರ ರಾಜ್ಯ ಚುನಾವಣೆಯಲ್ಲೂ ಕಾಂಗ್ರೆಸ್ ನೆಲಕಚ್ಚಲಿದೆ ಎಂದಿದ್ದಾರೆ.
ಕಾಂಗ್ರೆಸ್ ಅಧಿಕಾರ ದುರುಪಯೋಗ ಪಡಿಸಿಕೊಂಡು ಉಪಚುನಾವಣೆಯಲ್ಲಿ ಗೆದ್ದಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಜನತೆ ದೃಢವಿಶ್ವಾಸವನ್ನು ಮತ್ತೊಮ್ಮೆ ದೃಢಪಡಿಸಿದೆ ಎಂದು ಹೇಳಿದ್ದಾರೆ.
ಅಭಿವೃದ್ಧಿ ಮತ್ತು ವಿಕಸಿತ ಭಾರತ ನಿರ್ಮಾಣ ಮಾಡಬೇಕು ಎಂಬ ಎನ್ಡಿಎ ಬದ್ಧತೆಗೆ ಮತದಾರರು ಆಶೀರ್ವಾದ ಮಾಡಿದ್ದಾರೆ. ಜನರಿಗೆ ಕೇವಲ ಉಚಿತ ಘೋಷಣೆ ಮಾಡಿ ದೀರ್ಘಕಾಲ ಮರುಳು ಮಾಡಲು ಸಾಧ್ಯವಿಲ್ಲ ಎಂಬುದನ್ನು ಸಾಬೀತು ಮಾಡಿದ್ದಾರೆ.
ಮೌಲ್ಯಾಧಾರಿತ ಅಭಿವೃದ್ಧಿ, ಸ್ಥಿರತೆ, ಪಾರದರ್ಶಕ ಸರ್ಕಾರವನ್ನು ಜನರು ಬಯಸಿದ್ದಾರೆ. ಆದ್ದರಿಂದಲೇ ಬಿಜೆಪಿಗೆ ಗೆಲುವು ತಂದುಕೊಟ್ಟಿದ್ದಾರೆ. ಈ ಗೆಲುವಿಗಾಗಿ ಅಸಂಖ್ಯಾತ ಕಾರ್ಯಕರ್ತರು ಬದ್ಧತೆಯಿಂದ ಹಗಲಿರುಳು ಶ್ರಮಿಸಿದ್ದಾರೆ. ಅವರೇ ಪಕ್ಷದ ಬೆನ್ನೆಲುಬು. ಅನೇಕ ಬಿಜೆಪಿ ಕಾರ್ಯಕರ್ತರು ತಮ್ಮ ಜೀವನವನ್ನೇ ಸಮರ್ಪಿಸಿದ್ದಾರೆ. ಅವರ ತ್ಯಾಗದಿಂದ ಇಂದು ಪಶ್ಚಿಮಬಂಗಾಳ, ಆಸ್ಸಾಂ ಹಾಗೂ ಪುದುಚೇರಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಹೇಮಾ ನಂದೀಶ್ ಪ್ರಶಂಸಿಸಿದ್ದಾರೆ.
