ಮೈಸೂರು: ದಕ್ಷಿಣ ಭಾರತದಲ್ಲಿ ಬಿಜೆಪಿ ಈ ಮಟ್ಟಕ್ಕೆ ಬೆಳೆಯಲು ಮುಖ್ಯಕಾರಣ ಬಿ.ಎಸ್.ಯಡಿಯೂರಪ್ಪನವರು. ಕರ್ನಾಟಕ ರಾಜ್ಯಕ್ಕೆ ಬಿಎಸ್ವೈ ಸ್ಮರಣೀಯ ಸೇವೆ ಸಲ್ಲಿಸಿದ್ದಾರೆ ಎಂದು ಮಾಜಿ ಮಹಾಪೌರರಾದ ಸಂದೇಶ ಸ್ವಾಮಿ ಹೇಳಿದರು.
ಬಿಜೆಪಿ ಹಿರಿಯ ಮುಖಂಡ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದಾದ್ಯಂತ ಸೈಕಲ್ ಮೂಲಕ ಬಿಜೆಪಿಯನ್ನು ತಳಮಟ್ಟದಿಂದ ಬಲಪಡಿಸಿ ಜನಸೇವೆ ಮಾಡಿ ಇದೀಗ 50 ವರ್ಷ ತುಂಬಿರುವ ಪ್ರಯುಕ್ತ ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಅಭಿಮಾನೋತ್ಸವ ನಡೆಯಲಿದ್ದು,ಇಂದು ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರ ಭಾವಚಿತ್ರ ಹಿಡಿದು ಅಭಿಮಾನೋತ್ಸವ ಯಶಸ್ವಿಯಾಗಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ ವೇಳೆ ಸಂದೇಶ್ ಸ್ವಾಮಿ ಮಾತನಾಡಿದರು.
ಮೇ 9ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಭಾಗವಹಿಸುವರು. ಅದೇರೀತಿ
ಮೈಸೂರು ಜಿಲ್ಲೆಯಿಂದಲೂ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಬೇಕು,
ಯಡಿಯೂರಪ್ಪ ಅವರ ಕೊಡುಗೆ ಸ್ಮರಿಸುವುದು ಎಲ್ಲರ ಕರ್ತವ್ಯ. ಹೀಗಾಗಿ ಅಭಿಮಾನೋತ್ಸವಕ್ಕೆ ಈ ಭಾಗದ ಅಭಿಮಾನಿಗಳು ಸ್ವಯಂಪ್ರೇರಿತವಾಗಿ
ಬರಬೇಕು ಎಂದು ಮನವಿ ಮಾಡಿದರು.
ನಗರ ಪಾಲಿಕೆ ಮಾಜಿ ಸದಸ್ಯ ಮಾ ವಿ ರಾಮಪ್ರಸಾದ್ ಅವರು ಮಾತನಾಡಿ,
ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮ ರಾಜ್ಯ ಹಾಗೂ ರಾಷ್ಟ್ರದ ಗಮನ ಸೆಳೆದಿದೆ. ಅವರ ಅಭಿಮಾನಿಗಳು ಚಿತ್ರದುರ್ಗಕ್ಕೆ ತಂಡೋಪ ತಂಡವಾಗಿ ಬರಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಂ.ಡಿ ಪಾರ್ಥಸಾರಥಿ, ಜಗದೀಶ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷ ರಾಕೇಶ್ ಭಟ್, ಎಸ್ ಟಿ ಮೋರ್ಚಾ ನಗರಾಧ್ಯಕ್ಷ ಪಡುವಾರಹಳ್ಳಿ ರಾಮಕೃಷ್ಣ, ದೂರ ರಾಜಣ್ಣ, ಆನಂದ್, ಸಂದೀಪ್, ನಾಗೇಶ್ ಯಾದವ್, ಶಿವರಾಜ್, ಆನಂದ, ಮಧು, ಸುಚಿಂದ್ರ, ಚಂದನ್ ಗೌಡ,
ಮತ್ತಿತರರು ಹಾಜರಿದ್ದರು.
