ಚಿತ್ರದುರ್ಗ: ಶ್ವಾಸಕೋಶದ ಸೋಂಕಿನಿಂದ ನಿಧನರಾದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ಅಂತ್ಯಕ್ರಿಯೆ ಚಳ್ಳಕೆರೆ ಜೈನಧಾಮದಲ್ಲಿ ಸೋಮವಾರ ಸಂಜೆ ನೆರವೇರಿತು.
ಸದಾಕಾಲ ಹಸ್ಮಮುಖಿ ಹಾಗೂ ಜನಾನುರಾಗಿಯಾಗಿದ್ದ ಸಚಿವ ಡಿ.ಸುಧಾಕರ್ ಅವರಿಗೆ ಕುಟುಂಬಸ್ಥರು, ಸಂಬಂಧಿಗಳು, ಸಾರ್ವಜನಿಕರು ಅಶೃತರ್ಪಣದ ಮೂಲಕ ಅಂತಿಮ ವಿದಾಯ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಸೇರಿದಂತೆ ರಾಜ್ಯ ಸರ್ಕಾರ ಸಚಿವ ಸಂಪುಟದ ಸಹದ್ಯೋಗಿ ಸಚಿವರುಗಳು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಅಂತಿಮ ನಮನ ಸಲ್ಲಿಸಿದರು.
ಸರ್ಕಾರದ ವತಿಯಿಂದ ಗೌರವ ವಂದನೆ ಸಲ್ಲಿಸಲಾಯಿತು. ಪೊಲೀಸ್ ಇಲಾಖೆ ವತಿಯಿಂದ ಮೃತರ ಗೌರವಾರ್ಥ 3ಸುತ್ತಿನ ಕುಶಾಲತೋಪು ಸಿಡಿಸುವ ಮೂಲಕ ಗೌರವ ಸಲ್ಲಿಸಲಾಯಿತು.
ಪೊಲೀಸ್ ಬ್ಯಾಂಡ್ ರಾಷ್ಟ್ರಗೀತೆ ಮೊಳಗಿಸಿತು. ಒಂದು ನಿಮಿಷದ ಮೌನಾಚರಣೆ ಆಚರಿಸಿಲಾಯಿತು.ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಧ್ವಜವನ್ನು ಸಚಿವರ ಪತ್ನಿಗೆ ಹಸ್ತಾಂತರಿಸಿ, ಕುಟುಂಬ ವರ್ಗದವರನ್ನು ಸಂತೈಸಿದರು.
ಈ ವೇಳೆ ಸಚಿವರುಗಳಾದ ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಸತೀಶ್ ಜಾರಕೀಹೊಳಿ,ಜೆ.ಜಾರ್ಜ್, ಕೆ.ಹೆಚ್.ಮುನಿಯಪ್ಪ, ಶರಣ ಪ್ರಕಾಶ್ ಪಾಟೀಲ್, ಎಂ.ಸಿ.ಸುಧಾಕರ್, ಲಕ್ಷ್ಮೀ ಹೆಬ್ಬಾಳ್ಕರ್, ಈಶ್ವರ ಖಂಡ್ರೆ, ಭೈರತಿ ಸುರೇಶ್, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ, ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಕೃಷ್ಣ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಶಿರಾ ಶಾಸಕ ಟಿ.ಬಿ.ಜಯಚಂದ್ರ, ಕೊಡುಗು ವಿರಾಜಪೇಟೆ ಶಾಸಕ ಪಿ.ಎಸ್.ಪೊನ್ನಣ್ಣ, ಕುಣಿಗಲ್ ಶಾಸಕ ರಂಗನಾಥ್, ಶಿಗ್ಗಾವಿ ಶಾಸಕ ಯಾಸಿರ್ ಅಹಮದ್ ಖಾನ್ ಪಠಾಣ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಧ್ಯಕ್ಷ ಪಿ.ರಘು, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಮಾಜಿ ಸಚಿವರಾದ ಹೆಚ್.ಆಂಜನೇಯ, ವೆಂಕಟರಮಣಪ್ಪ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ದಾವಣಗೆರೆ ವಲಯ ಐಜಿಪಿ ರವಿಕಾಂತೇಗೌಡ, ಜಿಲ್ಲಾಧಿಕಾರಿ ಟಿ.ವೆಂಕಟೇಶ್. ಜಿ.ಪಂ.ಸಿಇಒ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾವಿರಾರು ಅಭಿಮಾನಿಗಳು ಹಾಜರಿದ್ದರು.
