ಮೈಸೂರು: ಅರಿವು ಸಂಸ್ಥೆ ವತಿಯಿಂದ
ಮಾಜಿ ಪ್ರಧಾನಿ ಹಿರಿಯ ರಾಜಕಾರಣಿ ಎಚ್ ಡಿ ದೇವೇಗೌಡರ ಹುಟ್ಟು ಹಬ್ಬದ ಅಂಗವಾಗಿ ಅವರ ಹೆಸರಿನಲ್ಲಿ ನಾಳೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ಕಶ್ಯಪ್ ತಿಳಿಸಿದ್ದಾರೆ.
ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಜನರಿಗೆ ಸಿಹಿ ವಿತರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಪೂಜಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಜಿ ಮಹಾಪೌರರಾದ ಸಂದೇಶ ಸ್ವಾಮಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ,ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪಾಯಿ,ಮುಡಾ ಮಾಜಿ ಅಧ್ಯಕ್ಷರಾದ ಯಶಸ್ವಿನಿ ಸೋಮಶೇಖರ್, ನಗರ ಪಾಲಿಕೆ ಮಾಜಿ ಸದಸ್ಯರಾದ ಮಾ ವಿ ರಾಮಪ್ರಸಾದ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಶ್ರೀಕಾಂತ್ ಮಾಹಿತಿ ನೀಡಿದ್ದಾರೆ.
