ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸಧ್ಯಕ್ಕೆ ಕೋರ್ಟ್ ನಿರಾಳ ನೀಡಿದೆ.
ಜಿಬಿಎ ಚುನಾವಣೆ ನಡೆಸುವ ವಿಚಾರವಾಗಿ ಮತ್ತೆ 2 ತಿಂಗಳು ಕಾಲಾವಕಾಶ ನೀಡಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮನವಿ ಮೇರೆಗೆ ಆಗಸ್ಟ್ 31 ರ ವರೆಗೆ ಸಮಯಾವಕಾಶ ನೀಡಿ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಈ ಮೊದಲು ಜೂನ್ ಅಂತ್ಯದೊಳಗೆ ಚುನಾವಣೆ ನಡೆಸಲು ಕೋರ್ಟ್ ಸೂಚಿಸಿತ್ತು. ಹೆಚ್ಚುವರಿ ಮೂರು ತಿಂಗಳು ಕಾಲಾವಕಾಶ ಕೇಳಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿತ್ತು. ಆದರೆ, ಸರ್ಕಾರದ ವಾದವನ್ನು ಕೋರ್ಟ್ ತಿರಸ್ಕರಿಸಿ ಎರಡು ತಿಂಗಳ ಸಮಯ ನೀಡಿದೆ.
