ಮೈಸೂರು: ಕಂಜನ್ ಆನೆಯನ್ನು ಮುಂದಿನ ದಸರಾಗೆ ಕೈ ಬಿಡುವ ಸಚಿವ ಈಶ್ವರ ಖಂಡ್ರೆ ಅವರ ನಿರ್ಧಾರ ಸ್ವಾಗತಾರ್ಹ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ ಹೇಳಿದ್ದಾರೆ
ದುಬಾರೆ ಆನೆ ಶಿಬಿರದಲ್ಲಿ ದಸರಾ ಆನೆ ಕಂಜನ್ ದಾಳಿಗೆ ಮಕನಾ ಆನೆ ಮಾರ್ತಾಂಡ ಮೃತಪಟ್ಟಿದ್ದಕ್ಕೆ ತೇಜಸ್ವಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಅನಿರೀಕ್ಷಿತವಾದ ಮತ್ತು ಊಹಿಸಲೂ ಆಗದ ದುರ್ಘಟನೆಯಲ್ಲಿ ಒಬ್ಬ ಪ್ರವಾಸಿ ಮಹಿಳೆ ಮತ್ತು ಒಂದು ಆನೆ ಮೃತಪಟ್ಟಿರುವುದು ಅತ್ಯಂತ ದುಃಖದ ಸಂಗತಿ ಎಂದು ಅವರು ಸಂತಾಪ ಸೂಚಿಸಿದ್ದಾರೆ.
ಹಾಸನ ಜಿಲ್ಲೆ ಆಲೂರಿನಲ್ಲಿ 2023 ರಲ್ಲಿ ಸೆರೆ ಹಿಡಿಯಲಾಗಿದ್ದ 53 ವರ್ಷದ ಮಾರ್ತಾಂಡ 4500 ಕೆ.ಜಿ. ತೂಕವಿತ್ತು. ಹಾಸನ ಜಿಲ್ಲೆ ಯಸಳೂರಿನ ಬಳಿ 2014ರಲ್ಲಿ ಸೆರೆ ಹಿಡಿಯಲಾಗಿದ್ದ 26 ವರ್ಷದ ಕಂಜನ್ 3 ಬಾರಿ ದಸರಾ ಮಹೋತ್ಸವದಲ್ಲಿ ಭಾಗಿಯಾಗಿತ್ತು.ಆದರೆ ಹಲವು ಬಾರಿ ಕಿರಿಕ್ ಮಾಡಿ ಕುಪ್ರಸಿದ್ದವಾಗಿತ್ತು.
ಕಂಜನ್ ಕಿರಿಕ್ ನಿಂದ ಸಾವು,ನೋವು ಸಂಭವಿಸಿದ ಕಾರಣ ಇನ್ನು ಮುಂದೆ ದಸರಾ ಮಹೋತ್ಸವಕ್ಕೆ ಈ ಆನೆಯನ್ನು ಬಳಸದಂತೆ ಸೂಚಿಸಿರುವುದಾಗಿ ಈಶ್ವರ ಖಂಡ್ರೆ ತಿಳಿಸಿದ್ದಾರೆ,
ಇದು ನಿಜಕ್ಕೂ ಒಳ್ಳೆಯದು,ದಸರಾ ಸಂದರ್ಭದಲ್ಲಿ ಈ ರೀತಿಯ ಘಟನೆ ನಡೆದರೆ ಎಂಬ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಕಂಜನ್ ಆನೆಯನ್ನು ದಸರಾ ದಿಂದ ಕೈ ಬಿಟ್ಟಿರುವುದು ಒಳ್ಳೆಯದು.
ಸಚಿವರ ಈ ನಿರ್ಧಾರಕ್ಕೆ ತೇಜಸ್ವಿ ನಾಗಲಿಂಗಸ್ವಾಮಿ ಸಹಮತ ವ್ಯಕ್ತಪಡಿಸಿದ್ದಾರೆ.
ಈ ರೀತಿಯ ಘಟನೆಗೆ ಮೇಲ್ನೋಟಕ್ಕೆ ಅಲ್ಲಿನ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಇರಬಹುದು. ಒಂದು ವೇಳೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ನಿರ್ಲಕ್ಷ್ಯ ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ತೇಜಸ್ವಿ ನಾಗಲಿಂಗಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
