ಮೈಸೂರು: ಮೈಸೂರಿನ ವಿಜಯನಗರ ದಲ್ಲಿರುವ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರೀ ಸ್ವಾಮಿಯ ಕುಂಭಾಭಿಷೇಕ ಮಹೋತ್ಸವವು ಸೋಮವಾರದಿಂದ ಧಾರ್ಮಿಕ ಕಾರ್ಯಗಳೊಂದಿಗೆ ಆರಂಭಗೊಂಡಿದೆ.
ಬೆಳಗ್ಗಿನಿಂದಲೇ ದೇವಾಲಯದ ಸಂಸ್ಥಾಪಕರಾದ ನಾಡೋಜ ಪ್ರೊ.ಡಾ. ಭಾಷ್ಯಂ ಸ್ವಾಮೀಜಿಯವರ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆಯಿತು.
ನೂರಾರು ಮಂದಿ ಭಕ್ತರು ದೇವಾಲಯಕ್ಕೆ ಆಗಮಿಸಿ ಶ್ರೀ ಸ್ವಾಮಿಯ ದರ್ಶನ ಪಡೆದರು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು.
ಸೋಮವಾರ ಬೆಳಗ್ಗೆ ಶ್ರೀ ಯೋಗಾನರಸಿಂಹಸ್ವಾಮಿಗೆ ಅಭಿಷೇಕ ಮತ್ತು ಲಕ್ಷಾರ್ಚನೆ ಕಾರ್ಯಗಳು ಜರುಗಿತು. ಬಳಿಕ ಮಹಿಳಾ ಸಂಘದವರಿಂದ ಲಲಿತಾ ಸಹಸ್ರನಾಮ ಪಾರಾಯಣ ನಡೆಯಿತು.
ಮೇ.೨೬ರ ಮಂಗಳವಾರ ಬೆಳಗ್ಗೆ ೯ ಗಂಟೆಗೆ ಶ್ರೀ ಯೋಗಾ ನರಸಿಂಹ ಸ್ವಾಮಿಯವರಿಗೆ ಸಹಸ್ರ ಕಳಶಾಭಿಷೇಕ ಮತ್ತು ಮಹಿಳಾ ಸಂಘದವರಿಂದ ಸೌಂದರ್ಯ ಲಹರಿ ಪಾರಾಯಣ ನಡೆಯಲಿದೆ.
ಮೇ.೨೭ರ ಬುಧವಾರ ಬೆಳಗ್ಗೆ ೯ ಗಂಟೆಗೆ ಶ್ರೀ ಯೋಗಾನರಸಿಂಹಸ್ವಾಮಿಗೆ ಕುಂಭಾಭಿಷೇಕ ಮತ್ತು ಅಖಂಡ ಮಹಾ ಸುದರ್ಶನ ಹೋಮ ಜರುಗಲಿದೆ. ತದನಂತರ ಮಹಿಳಾ ಸಂಘದವರಿಂದ ವಿಷ್ಣು ಸಹಸರನಾಮ ಪಾರಾಯಣ ಜರುಗಲಿದೆ.ಮಧ್ಯಾಹ್ನ ೧೨ ಗಂಟೆಗೆ ಪೂರ್ಣಾಹುತಿ ನಡೆಯಲಿದ್ದು, ೧೨.೩೦ರನಂತರ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ತಿಳಿಸಿದ್ದಾರೆ.
