ಬೆಂಗಳೂರು: ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಇಂದು ಬೆಳಿಗ್ಗೆ ನಡೆದ ಬ್ರೇಕ್ಫಾಸ್ಟ್ ಸಭೆಯಲ್ಲಿ ಸಿದ್ದರಾಮಯ್ಯ ಈ ಘೋಷಣೆ ಮಾಡುವ ಮೂಲಕ ಇದುವರೆಗೆ ನಡೆದ ಹಗ್ಗ ಜಗ್ಗಾಟಕ್ಕೆ ತೆರೆ ಎಳೆದರು.
ಸಿಎಂ ಸ್ಥಾನಕ್ಕೆ ರಾಜೀನಾಮೆಗೂ ಮುನ್ನ ಸಚಿವರ ಜೊತೆ ಸಿದ್ದರಾಮಯ್ಯ ಇಂದು ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸಿದರು.
ಸಭೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ಘೋಷಿಸುತ್ತಿದ್ದಂತೆ ಆಪ್ತ ಸಚಿವರು ಭಾವುಕರಾದರು.
ನಂತರ ಸಿದ್ದರಾಮಯ್ಯ, ನಾನು ಇಲ್ಲೇ ಇರಬೇಕು ಅಂದ್ಕೊಂಡಿದೀನಿ, ರಾಷ್ಟ್ರ ರಾಜಕಾರಣ ನನಗೆ ಇಷ್ಟ ಇಲ್ಲ, ನಾನು ಬೇಡ ಅಂದಿದ್ದೇನೆ. ಇಲ್ಲೇ ಇದ್ದುಕೊಂಡು ಸಹಕಾರ ಕೊಡುತ್ತೇನೆ. ಗ್ಯಾರಂಟಿಗಳನ್ನ ಕಷ್ಟಪಟ್ಟು ಅನುಷ್ಠಾನ ಮಾಡಿದ್ದೀವಿ, ಮುಂದುವರಿಸೋಣ ಎಂದು ಸಿದ್ದರಾಮಯ್ಯ ಹೇಳಿದರು.
ಬೆಳಿಗ್ಗೆ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು. ಮುಂದೆಯೂ ನಿಮ್ಮ ಸಹಕಾರ ಹೀಗೇ ಇರಬೇಕೆಂದು ಅಪ್ಪುಗೆ ನೀಡಿ ಕೋರುವ ಮೂಲಕ ಒಂದು ಕ್ಷಣ ಭಾವುಕರಾದರು.
