ಬೆಳಗಾವಿ: ರಾಜ್ಯ ವಿಪತ್ತು ನಿರ್ವಹಣಾ ಪಡೆ ಯ ಸಿಪಿಐ ಶ್ರೀಶೈಲ ಚೌಗಲೆ (37) ಅವರು ಬೆಳಗಾವಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗಾವಿಯ ಚನ್ನಮ್ಮ ನಗರದಲ್ಲಿ ಗುರುವಾರ ಈ ಘಟನೆ ನಡೆದಿದೆ.
ಚೌಗಲೆ ಅವರು ಕೊಠಡಿ ಬಾಗಿಲು ಹಾಕಿಕೊಂಡಿದ್ದರು ಬೆಳಿಗ್ಗೆ ಎಷ್ಟು ಹೊತ್ತಾದರೂ ಏಳದ ಕಾರಣ ಅನುಮಾನಗೊಂಡ ಪತ್ನಿ ತಕ್ಷಣ ಎಸ್ಡಿಆರ್ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕೊಠಡಿಯ ಬಾಗಿಲು ಮುರಿದು ಒಳಗೆ ಹೋದಾಗ ಚೌಗಲೆ ಅವರು ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ.ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರು.ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ ಮುಂದಿನ ಕ್ರಮ ಕೈಗೊಂಡರು.
ಘಟನೆ ಕುರಿತು ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
2025 ರ ಮುಖ್ಯ ಮಂತ್ರಿ ಪದಕ ಪಡೆದಿದ್ದ ಚೌಗಲೆ ಅವರ ಹೆಸರು ಬಡ್ತಿ ಪಟ್ಟಿಯಲ್ಲೂ ಇತ್ತು,ಆದರೆ 37 ವರ್ಷದ ಅವರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡರು ಎಂಬುದು ನಿಗೂಢವಾಗಿದೆ.
