ಮೈಸೂರು: ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಉಪ-ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಬ್ರಾಹ್ಮಣ ಯುವ ವೇದಿಕೆ ಮನವಿ ಮಾಡಿದೆ.
ನೂತನ ಸಚಿವ ಸಂಪುಟದಲ್ಲಿ ದಿನೇಶ್ ಗುಂಡೂರಾವ್ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಮುಖಂಡ ಹಾಗೂ ಬ್ರಾಹ್ಮಣ ಯುವ ವೇದಿಕೆಯ ವಿನಯ್ ಕಣಗಾಲ್ ಅವರು ಕಾಂಗ್ರೆಸ್ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.
ಆಹಾರ ಮತ್ತು ಆರೋಗ್ಯ ಎರಡೂ ಇಲಾಖೆಯ ಖಾತೆಗಳನ್ನ ಸಚಿವರಾಗಿ ಯಶಸ್ವಿಯಾಗಿ ನಿರ್ವಹಿಸಿರುವ ದಿನೇಶ್ ಗುಂಡೂರಾವ್ ಅವರು ಯುವ ಕಾಂಗ್ರೆಸ್ ನಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೂಲಕ ಪಕ್ಷ ಚಟುವಟಿಕೆಯಲ್ಲಿ ನಿರಂತರವಾಗಿ ಶ್ರಮಿಸಿದ್ದಾರೆ ಎಂದು ಅವರು ಮನವಿಯಲ್ಲಿ ಗಮನ ಸೆಳೆದಿದ್ದಾರೆ.
ಬ್ರಾಹ್ಮಣ ಸಮುದಾಯದ ಬಲಿಷ್ಠ ನಾಯಕರಾಗಿರುವ ದಿನೇಶ್ ಗುಂಡುರಾವ್ ಅವರು ಸಾಮರಸ್ಯ ಮತ್ತು ಸಾಮಾಜಿಕ ನ್ಯಾಯದ ಮೂಲಕ ಕರ್ನಾಟಕದ ಜನಮಾನಸದಲ್ಲಿ ಉತ್ತಮ ನಾಯಕತ್ವದ ಗುಣಗಳನ್ನ ಸಂಪಾದಿಸಿದ್ದಾರೆ ಹಾಗಾಗಿ ನೂತನ ಸಚಿವ ಸಂಪುಟದಲ್ಲಿ ದಿನೇಶ್ ಗುಂಡೂರಾವ್ ರವರಿಗೆ ಉಪ ಮುಖ್ಯ ಮಂತ್ರಿ ಸ್ಥಾನ ಕಲ್ಪಿಸಬೇಕೆಂದು ಪ್ರಕಟಣೆಯ ಮೂಲಕ ಯುವ ಕಾಂಗ್ರೆಸ್ ಮುಖಂಡ ಹಾಗೂ ಬ್ರಾಹ್ಮಣ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ವಿನಯ್ ಕಣಗಾಲ್ ಸವರು ಕಾಂಗ್ರೆಸ್ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.
