ಯಳಂದೂರು: ಯಳಂದೂರು ಪಟ್ಟಣದಲ್ಲಿ
ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ ವಿಜೃಂಭಣೆಯ ಮೆರವಣಿಗೆ ಹಮ್ಮಿಕೊಳ್ಳಲಾಯಿತು.
ಪಟ್ಟಣದಲ್ಲಿ ಭಾನುವಾರ ತಾಲೂಕು ಅಂಬೇಡ್ಕರ್ ಸೇವಾ ಸಮಿತಿ ವತಿಯಿಂದ ಡಾ.ಅಂಬೇಡ್ಕರ್ ಜಯಂತಿಯನ್ನು ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.
ನಂತರ ಬೆಳ್ಳಿರಥದಲ್ಲಿ ಅಂಬೇಡ್ಕರ್ ಭಾವಚಿತ್ರ ಇಟ್ಟು ವಿವಿಧ ಪುಷ್ಪಾಲಂಕಾರಗಳಿಂದ ಶೃಂಗರಿಸಿ ಅಂಬೇಡ್ಕರ್ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ತಾಲೂಕಿನ ಪ್ರಗತಿಪರ ಸಂಘಟನೆಗಳ ಪ್ರಮುಖರ ನೇತೃತ್ವದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಕೊಳ್ಳೇಗಾಲ ಡಿ ವೈ ಎಸ್ ಪಿ ಮೋಹನ್ ಅವರು ಮೆರವಣಿಗೆಗೆ ಚಾಲನೆ ನೀಡಿದರು.
ನಂತರ ವಾದ್ಯಕಲಾ ತಂಡದೊಂದಿಗೆ ತಾಲೂಕಿನ ವಿವಿಧ ಗ್ರಾಮಗಳಿಂದ ಆಟೋಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಇಟ್ಟು ಶೃಂಗರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿದ್ದು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಯುವ ಪಡೆ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಮೆರವಣಿಗೆಯಲ್ಲ ಸಾವಿರಾರು ಜನರು ಸಂಭ್ರಮದಿಂದ ಪಾಲ್ಗೊಂಡಿದ್ದರು.
