ಮೈಸೂರು: ಸಂಚಾರ ನಿಯಮ ಉಲ್ಲಂಘಿಸಿ ಇ-ಚಲನ್ ಮೂಲಕ ದಾಖಲಾಗಿರುವ ಬಾಕಿ ದಂಡದ ಮೊತ್ತದಲ್ಲಿ ಶೇ 50 ರಷ್ಟು ರಿಯಾಯಿತಿ ನೀಡಿ ಪಾವತಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅದಮತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಾರ್ವಜನಿಕರಿಗೆ ಈ ಕುರಿತು ಸೂಚನೆ ನೀಡಿದ್ದಾರೆ.
ಮೇ-2026ಕ್ಕಿಂತ ಮೊದಲು ಇ-ಚಲನ್ನಲ್ಲಿ ದಾಖಲಾಗಿ ಬಾಕಿ ಉಳಿದಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತಕ್ಕೆ ಮಾತ್ರ ಶೇ 50ರ ರಿಯಾಯಿತಿ ದೊರೆಯಲಿದೆ.
21.06.2026 ರಿಂದ 10.07.2026 ರವರೆಗೆ ಒಟ್ಟು 20 ದಿನಗಳ ಕಾಲ ಈ ಸೌಲಭ್ಯ ಸಿಗಲಿದೆ.
ಬಾಕಿ ದಂಡ ಹೊಂದಿರುವ ವಾಹನ ಸವಾರರು ಹಾಗೂ ಸಾರ್ವಜನಿಕರು ಮೈಸೂರು ಜಿಲ್ಲೆಯ ಯಾವುದೇ ಹತ್ತಿರದ ಪೊಲೀಸ್ ಠಾಣೆಯಲ್ಲಿ ರಿಯಾಯಿತಿ ದರದಲ್ಲಿ ದಂಡ ಪಾವತಿಸಬಹುದು ಎಂದು ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಮೇ-2026ರ ನಂತರ ದಾಖಲಾದ ಪ್ರಕರಣಗಳಿಗೆ ಈ ರಿಯಾಯಿತಿ ಅನ್ವಯಿಸುವುದಿಲ್ಲ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಬಾಕಿ ದಂಡ ಪಾವತಿಸಿ ಎಂದು ಎಸ್ಪಿ ಸಲಹೆ ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದ್ದಾರೆ.
