ಮೈಸೂರು: ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿರುವ ಮೈ ಭಾರತ್ ಕೇಂದ್ರ, ಮೈಸೂರು ವತಿಯಿಂದ ಶ್ರೀರಾಂಪುರದ ಮಹಾವೀರ್ ವಿದ್ಯಾಮಂದಿರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಗಿಡಗಳನ್ನು ವಿತರಿಸುವ ಮೂಲಕ ಚಾಲನೆ ನೀಡಲಾಯಿತು. ಮಹಾವೀರ್ ವಿದ್ಯಾಮಂದಿರದ ಮುಖ್ಯೋಪಾಧ್ಯಾಯರಾದ ಶ್ರೀಕಂಠ ದತ್ತ ಎನ್. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಭಾಷಣಕಾರರಾಗಿ ವಿಜ್ಞಾನ ಶಿಕ್ಷಕಿ ಲಕ್ಷ್ಮೀ ಅವರು ವಿಶ್ವ ಪರಿಸರ ದಿನದ ಮಹತ್ವ ಹಾಗೂ ಪರಿಸರ ಸಂರಕ್ಷಣೆಯ ಅಗತ್ಯತೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಆಯೋಜಕರಾದ ಅಮಿತ್ ಕುಮಾರ್ ಸಿ.ಎಲ್., ಸಹಾಯಕ ಮುಖ್ಯೋಪಾಧ್ಯಾಯರಾದ ಸುಮಾ ಕೆ.ಸಿ. ಹಾಗೂ ಶಾಲೆಯ ಶಿಕ್ಷಕ ವೃಂದ ಉಪಸ್ಥಿತರಿದ್ದರು.
ವಿಶ್ವ ಪರಿಸರ ದಿನದ ಅಂಗವಾಗಿ ಆಯೋಜಿಸಿದ್ದ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ನೀಡಲಾಯಿತು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣಕ್ಕೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸುವ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
