ಕೊಳ್ಳೇಗಾಲ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದು ನ್ಯಾಯಾಧೀಶರಾದ ಎಂ ಕಾವ್ಯಶ್ರೀ ಅವರು ತಿಳಿಸಿದರು.
ಕೊಳ್ಳೇಗಾಲ ತಾಲ್ಲೂಕು ತಿಮ್ಮರಾಜಿಪುರದಲ್ಲಿ
ಚಾಮರಾಜನಗರ ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ,ಕೊಳ್ಳೇಗಾಲ ವನ್ಯಜೀವಿ ವಲಯ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕೊಳ್ಳೇಗಾಲ ತಾಲೂಕು ಕಾನೂನು ಸೇವಾ ಸಮಿತಿ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಮುಂದಿನ ಪೀಳಿಗೆಗೆ ಪ್ರಸ್ತುತ ಪರಿಸರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಆದ್ಯ ಕರ್ತವ್ಯವಾಗಬೇಕು, ಪರಿಸರ ಮಾಲಿನ್ಯ, ವಾಯು ಮಾಲಿನ್ಯ, ಜಲಮಾಲಿನ್ಯ, ಮತ್ತು ಅರಣ್ಯ ವನ್ಯಜೀವಿಗಳನ್ನು ಸಂರಕ್ಷಿಸದೆ ಹೋದಲ್ಲಿ ಮುಂದಿನ ಪೀಳಿಗೆಗೆ ಅಪಾರ ನಷ್ಟ ಉಂಟಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರತಿಯೊಬ್ಬರೂ ವೈಯಕ್ತಿಕ ಜವಾಬ್ದಾರಿಯೊಂದಿಗೆ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಶುದ್ಧ ಗಾಳಿ, ಕುಡಿಯುವ ನೀರು, ಉತ್ತಮ ಆಹಾರ ಬಳಕೆಯಿಂದ ಒಳ್ಳೆಯ ಆರೋಗ್ಯವನ್ನು ಹೊಂದಿ ಸಮಾಜಕ್ಕೆ ಉತ್ತಮ ಪ್ರಜೆಗಳಾಗಿ,ಮಾನವೀಯ ಮೌಲ್ಯಗಳು ಅಳವಡಿಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದ ನಂತರ ಜಕ್ಕಳ್ಳಿ ಆಟದ ಮೈದಾನ, ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಆವರಣದಲ್ಲಿ ಸುಮಾರು ವಿವಿಧ ಜಾತಿಯ 60 ಗಿಡಗಳನ್ನು ನೆಡಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯ ಅರಣ್ಯ ವೀಕ್ಷಕರಾದ ಮುಕುಂದ ಮತ್ತು ಗೋವಿಂದರವರನ್ನ ಸನ್ಮಾನಿಸಲಾಯಿತು.
ಟಿ.ಸಿ. ಶ್ರೀಕಾಂತ್, ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಸುನೀತಾ ಹಿರಿಯ ಸಿವಿಲ್ ನ್ಯಾಯಾಧೀಶರು, ಎಂ.ರಂಜಿತ್ ಕುಮಾರ್, ಅಪರ ಸಿವಿಲ್ ನ್ಯಾಯಾಧೀಶರು, ಮಹೇಶ್ ಕೆ ಪ್ರಾಂಶುಪಾಲರು, ವಾಸು ಬಿ ಎಸ್, ವಲಯ ಅರಣ್ಯಾಧಿಕಾರಿಗಳು ಹಾಗೂ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿ ಹಾಜರಿದ್ದರು.
