ಗುಜರಾತ್: ಗುಜರಾತ್ನ ಸೂರತ್ ನಗರದ ಆಭರಣ ಉತ್ಪಾದನಾ ಘಟಕದಲ್ಲಿ ಭಾನುವಾರ ಬೆಳಿಗ್ಗೆ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ನಡೆದಿದೆ.
ಉಸಿರುಗಟ್ಟಿ ಕಾರ್ಮಿಕರು ಸಾವನ್ನಪ್ಪಿರಬಹುದು,ಮರಣೋತ್ತರ ಪರೀಕ್ಷೆಯ ವರದಿಯಿಂದ ನಿಖರವಾದ ಕಾರಣ ತಿಳಿಯುತ್ತದೆ ಎಂದು ವಲಯ -1 ರ ಉಪ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಅಶ್ವಿನಿ ಕುಮಾರ್ ಪ್ರದೇಶದ ಆಭರಣ ಶುಚಿಗೊಳಿಸುವ ಪ್ರಕ್ರಿಯೆಯಿಂದ ತ್ಯಾಜ್ಯವನ್ನು ಸಂಗ್ರಹಿಸುವ ಸೆಪ್ಟಿಕ್ ಟ್ಯಾಂಕ್ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಅವರು ಹೇಳಿದರು.
ಈ ಸೆಪ್ಟಿಕ್ ಟ್ಯಾಂಕ್ ಅನ್ನು ಪ್ರತಿ ಎರಡು ತಿಂಗಳಿಗೊಮ್ಮೆ ಸ್ವಚ್ಛಗೊಳಿಸಿ ನಿರ್ವಹಣೆಗೆ ಒಳಪಡಿಸಲಾಗುತ್ತದೆ.
ಬೆಳಿಗ್ಗೆ, ಒಬ್ಬ ಮೇಲ್ವಿಚಾರಕ ಮತ್ತು ಮೂವರು ಕಾರ್ಮಿಕರು ಸೇರಿ ಒಟ್ಟು ನಾಲ್ವರು ವ್ಯಕ್ತಿಗಳು ಟ್ಯಾಂಕ್ಗೆ ಇಳಿದಿದ್ದರು ವಿಷಕಾರಿ ಅನಿಲದಿಂದಾಗಿ ಅವರು ಉಸಿರುಗಟ್ಟಿ ಸಾವನ್ನಪ್ಪಿದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಸುರಕ್ಷತಾ ಶಿಷ್ಟಾಚಾರಗಳನ್ನು ಪಾಲಿಸಿಲ್ಲ ಎಂದು ಸೂಚಿಸುತ್ತವೆ. ಆದರೆ, ನಾವು ಈ ವಿಷಯದ ಬಗ್ಗೆ ವಿವರವಾದ ತನಿಖೆ ನಡೆಸುತ್ತೇವೆ ಎಂದು ಅವರು ಹೇಳಿದ್ದಾರೆ.
ಘಟನೆ ವರದಿಯಾದ ತಕ್ಷಣ, ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ, ನಾಲ್ವರು ಕಾರ್ಮಿಕರನ್ನು ಟ್ಯಾಂಕ್ನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತು,ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
