ಮೈಸೂರು: ಬಾಲಕಾರ್ಮಿಕ ಪದ್ಧತಿ ಸಾಮಾಜಿಕ ಪಿಡುಗಾಗಿದೆ, ಅದು ನಿರ್ಮೂಲನೆ ಯಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಲಕ್ಷ್ಮಿಪುರಂ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ರವಿಶಂಕರ್ ಅಭಿಪ್ರಾಯ ಪಟ್ಟಿದ್ದಾರೆ.
ಚಾಮುಂಡಿಪುರಂನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಾಲ ಭೋಧಿನಿ ಶಾಲೆಯಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಹಾಗೂ ಅಪೂರ್ವ ಸ್ನೇಹ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.
ಈ ವೇಳೆ ರವಿಶಂಕರ್ ಅವರು ಮಕ್ಕಳಲ್ಲಿ ಜಾಗೃತಿ ಮೂಡಿಸಿ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲ ನಾಗರಿಕರ ಸಹಕಾರ ಬಹಳ ಮುಖ್ಯ. ಶಿಕ್ಷಣ ಪಡೆಯುವ ವಯಸ್ಸಿನಲ್ಲಿ ಕಟ್ಟಡಗಳ ಕೆಲಸಗಳಲ್ಲಿ, ಅಂಗಡಿಗಳಲ್ಲಿ, ಗ್ಯಾರೇಜ್, ಹೋಟೆಲ್, ಕಾರ್ಖಾನೆಗಳಲ್ಲಿ, ಬೇಕರಿ ಮತ್ತಿತರ ಸ್ಥಳಗಳಲ್ಲಿ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ವಿಷಾದಿಸಿದರು.
ಇಂತಹ ಪ್ರಕರಣಗಳನ್ನು ಕಂಡರೆ ತಕ್ಷಣವೇ ಸಕ್ಷಮ ಇಲಾಖೆಯ ಅಧಿಕಾರಿಗಳಿಗೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಸಾರ್ವಜನಿಕರು ಸಾಮಾಜಿಕ ಹೊಣೆಗಾರಿಕೆಯನ್ನು ನಿರ್ವಹಿಸಬೇಕು ಎಂದು ರವಿಶಂಕರ್ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಮಕ್ಕಳಿಗೆ ಪುಸ್ತಕ ಲೇಖನಿಗಳನ್ನು ವಿತರಿಸಲಾಯಿತು
ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಕೆಬಿ ಲಿಂಗರಾಜು,ಕರ್ನಾಟಕ ಬ್ಯಾಂಕ್ ನ ನಿವೃತ್ತ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ವಿಶ್ವನಾಥ್, ಅಪೂರ್ವ ಸುರೇಶ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಉಪಾಧ್ಯಕ್ಷ ವಿಕ್ರಂ ಅಯ್ಯಂಗಾರ್, ಕೆ ಆರ್ ಬ್ಯಾಂಕ್ ಅಧ್ಯಕ್ಷರಾದ ಬಸವರಾಜ್ ಬಸಪ್ಪ,ಅರಿವು ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್,ಶಾಲೆಯ ಮುಖ್ಯ ಶಿಕ್ಷಕರಾದ ಲತಾ,ದೂರರಾಜಣ್ಣ,ಎಸ್ ಎನ್ ರಾಜೇಶ್, ಶಿಕ್ಷಕರಾದ ಲತಾ ಕುಮಾರಿ, ಮೊಸಿನ್ ತಾಜ್, ಲೀಲಾವತಿ, ಮಮತಾ ಮತ್ತಿತರರು ಹಾಜರಿದ್ದರು.
