ಧಾರವಾಡ: ಧಾರವಾಡ ಕೇಂದ್ರ ಕಾರಾಗೃಹದ ಜೈಲರ್ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ.
ಧಾರವಾಡದ ಹೊಸ ಬಸ್ ನಿಲ್ದಾಣದ ಬಳಿ ಇರುವ ಕಾರಾಗೃಹದ ವಸತಿ ಗೃಹದಲ್ಲಿ ಜೈಲರ್ ಸಿದ್ಧರಾಮಪ್ಪ ವಡ್ಡರ್ (37) ಆತ್ಮಹತ್ಯೆ ಮಾಡಿಕೊಂದ್ದಾರೆ.
ಕಳೆದ ಎರಡು ತಿಂಗಳ ಹಿಂದೆ ಅಮಾನತ್ತಾಗಿದ್ದ ಸಿದ್ಧರಾಮಪ್ಪ ಅವರನ್ನು ಮೈಸೂರು ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು.ಆದರೆ ಅವರು ಇನ್ನೂ ಅಧಿಕಾರ ಸ್ವೀಕರಿಸಿರಲಿಲ್ಲ.
ಅದೇನಾಯಿತೊ ಏನೋ ಇಂದು ಮಧ್ಯಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ.
ಮೃತರ ಪತ್ನಿ ಹಿರಿಯ ಅಧಿಕಾರಿಗಳ ಕಿರುಕುಳದಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಕೊಠಡಿಯಿಂದ ಬಹಳ ಹೊತ್ತಾದರೂ ಸಿದ್ದರಾಮಪ್ಪ ಹೊರಗೆ ಬಾರದಿದ್ದಾಗ ಮನೆಯವರು ಹೋಗಿ ನೋಡಿದ್ದಾರೆ.ಆಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಕುಟುಂಬಸ್ಥರ ಆಕ್ರಂದನ ಮೇರೆ ಮೀರಿತ್ತು.
ಜೈಲರ್ ಸಿದ್ಧರಾಮಪ್ಪ ಅವರನ್ನು ಕಳೆದ ಎರಡು ತಿಂಗಳ ಹಿಂದೆ ಜೈಲಿನಲ್ಲಿ ಕರ್ತವ್ಯ ಲೋಪದ ಹಿನ್ನೆಲೆ ಅಮಾನತ್ತು ಮಾಡಲಾಗಿತ್ತು.
ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದರು
