ಮೈಸೂರು: ಮಳೆಗಾಲವೇನೊ ಪ್ರಾರಂಭವಾಗಿದೆ ಆದರೆ ವರುಣನ ಅವಕೃಪೆ ಯಿಂದಾಗಿ,ರೈತರ ಜೀವನಾಡಿ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ದಿನೇ ದಿನೆ ಕುಸಿಯುತ್ತಿದೆ.
ಜೂನ್ ಅರ್ಧ ತಿಂಗಳು ಕಳೆದರೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಸರಿಯಾಗಿ ಮಳೆಯಾಗಿಲ್ಲ. 124 ಅಡಿ ಗರಿಷ್ಠ ಸಂಗ್ರಹ ಈಗ ಇರುವುದು ಕೇವಲ 81 ಅಡಿ ಮಾತ್ರ.
ಕೆಆರ್ಎಸ್ನಲ್ಲಿ ಸದ್ಯ ಕೇವಲ 11 ಟಿಎಂಸಿ ನೀರು ಸಂಗ್ರಹವಾಗಿದೆ. ಇದರಲ್ಲಿ 4ರಿಂದ 5 ಟಿಎಂಸಿ ಡೆಡ್ ಸ್ಟೋರೇಜ್ ಆಗಿದ್ದು, ಬಳಕೆಗೆ ಲಭ್ಯವಿರುವುದು ಕೇವಲ 7 ಟಿಎಂಸಿ ಮಾತ್ರ.
ಸದ್ಯದ ನೀರಿನ ಸಂಗ್ರಹ ಬೆಂಗಳೂರು, ಮೈಸೂರು ಮತ್ತು ಮಂಡ್ಯ ಭಾಗದ ಕುಡಿಯುವ ನೀರಿನ ಅಗತ್ಯಕ್ಕೆ ಸಾಲುವುದಿಲ್ಲ. ಮುಂದಿನ ದಿನಗಳಲ್ಲಿ ಮಳೆ ಬಾರದಿದ್ದರೆ ಈ ಮೂರು ನಗರಗಳಿಗೆ ಕುಡಿಯುವ ನೀರಿನ ಸಂಕಷ್ಟ ಎದುರಾಗುವುದು ಗ್ಯಾರಂಟಿ.
ಇದರ ನಡುವೆ ಸುಪ್ರೀಂಕೋರ್ಟ್ ಆದೇಶದಂತೆ ಜೂನ್ ತಿಂಗಳಲ್ಲಿ ತಮಿಳುನಾಡಿಗೆ ನಿಗದಿತ ಪ್ರಮಾಣದ ನೀರನ್ನು ಬಿಡುಗಡೆ ಮಾಡಬೇಕಾದ ಒತ್ತಡ ಹಾಗೂ ಅನಿವಾರ್ಯತೆ ಎದುರಾಗಿದೆ.
