ಮೈಸೂರು: ಮೈಸೂರಿನ ಅರಿವು ಸಂಸ್ಥೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಪರಿಸರದ ಬಗ್ಗೆ ಕಾಳಜಿ ಹೊಂದಿರುವ ಆರು ಮಂದಿಗೆ ಪರಿಸರ ಪ್ರೇಮಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಪರಿಸರ ಪ್ರೇಮಿಗಳಾದ ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್,
ಕಡಕೋಳ ಪಟ್ಟಣ ಪಂಚಾಯತ್ ಆರೋಗ್ಯ ನಿರೀಕ್ಷಕರಾದ ಮಂಜುನಾಥ್ ,ಪರಿಸರ ಪ್ರೇಮಿ ಕೃಷ್ಣಪ್ಪ (ಘಂಟಯ್ಯ),ಗಗನ್ ಗೌಡ,ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್,ಶಿಕ್ಷಕಿ ರೇಣುಕಾ ಅವರುಗಳು ಪರಿಸರ ಪ್ರೇಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಚಾಮುಂಡಿಪುರಂನಲ್ಲಿರುವ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಜೂನ್ 17ರಂದು ಬೆಳಗ್ಗೆ 11.30 ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಅರಿವು ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್ ತಿಳಿಸಿದ್ದಾರೆ.
ಈ ಸಮಾರಂಭದ ಮುಖ್ಯ ಅತಿಥಿಗಳಾಗಿ
ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ,ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಕೆ.ಬಿ ಲಿಂಗರಾಜು,ಕಾಂಗ್ರೆಸ್ ಮುಖಂಡರಾದ ಎನ್ ಎಂ ನವೀನ್ ಕುಮಾರ್, ಹಿರಿಯ ಸಮಾಜ ಸೇವಕ ರಘುರಾಮ್ ವಾಜಪೇಯಿ, ನಗರಪಾಲಿಕೆ ಮಾಜಿ ಸದಸ್ಯ ಮಾ ವಿ ರಾಮಪ್ರಸಾದ್ ,ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್,ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ ಮತ್ತಿತರರು ಭಾಗವಹಿಸಲಿದ್ದಾರೆ.
