ಮೈಸೂರು: ಮೈಸೂರಿನ ದಟ್ಟಗಳ್ಳಿ ಪ್ರದೇಶದಲ್ಲಿನ ಪಬ್/ರೆಸ್ಟೋರೆಂಟ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡವರನ್ನು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಈ ವೇಳೆ ಗಾಯಾಳುಗಳ ಚಿಕಿತ್ಸೆ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡು, ಆರೋಗ್ಯ ಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸಿ ಅತ್ಯಗತ್ಯವಾದ ಎಲ್ಲಾ ವೈದ್ಯಕೀಯ ಸೌಲಭ್ಯಗಳನ್ನು ನೀಡುವಂತೆ ವೈದ್ಯರು ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಸೂಚಿ ಸಿದರು.
ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಡಾ.ಯತೀಂದ್ರ ತಿಳಿಸಿದರು
