ಚಾಮರಾಜನಗರ: ಜಿಲ್ಲೆಯ ಯಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯ
ಬಸ್ ನಿಲ್ದಾಣದ ಬಳಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೇಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಸಹಾಯಕ ಅರಕ್ಷಕ ಉಪ ನಿರೀಕ್ಷಕ ನಂದಕುಮಾರ್ ರವರಿಗೆ ದೊರೆತ ಮಾಹಿತಿ ಮೇರೆಗೆ ನಿನ್ನೆ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೇಟ್ ಮಾರಾಟ ಮಾಡುತ್ತಿದ್ದ ಆರೋಪಿ ಎಂ.ಶ್ರೀನಿವಾಸ @ ಟ್ರಾಕ್ಟರ್ ಶ್ರೀನಿವಾಸ್ ಎಂಬಾತನನ್ನು ಬಂಧಿಸಲಾಗಿದೆ.
ಆತನ ಬಳಿ ಇದ್ದ 1,350 ರೂ ಮೌಲ್ಯದ ಒಟ್ಟು 27 ಲಾಟರಿ ಟಿಕೇಟ್ಗಳನ್ನು ವಶಕ್ಕೆ ಪಡೆದು ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
