ತಮಿಳುನಾಡು: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಪೆರಿಯಪಾಳಯಂ ಸಮೀಪದ ಕಣ್ಣಿಕೈಪೇರ್ ಗ್ರಾಮದಲ್ಲಿ ಸೀಫುಡ್ ಕಾರ್ಖಾನೆಯಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ಏಳು ಮಂದಿ ಮೃತಪಟ್ಟಿದ್ದಾರೆ.
ಅನಿಲ ಸೋರಿಕೆಯಿಂದಾಗಿ 75ಕ್ಕೂ ಹೆಚ್ಚು ಮಂದಿ ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾರ್ಖಾನೆಯಲ್ಲಿದ್ದ ಶೈತ್ಯೀಕರಣ ಟ್ಯಾಂಕ್ನಲ್ಲಿ ಸೋರಿಕೆ ಉಂಟಾಗಿದೆ.
ಅಸ್ವಸ್ಥರನ್ನು ತಿರುವಳ್ಳೂರು ಸರ್ಕಾರಿ ಆಸ್ಪತ್ರೆ, ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆ ಮತ್ತು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಅರಕೋಣಂನಿಂದ ಧಾವಿಸಿದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆ ನಡೆಸಿತು.
ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಘಟನೆಯ ಬಗ್ಗೆ ತನಿಖೆ ನಡೆಸಲು 3 ಸದಸ್ಯರ ವಿಶೇಷ ಸಮಿತಿಯನ್ನು ರಚಿಸಿದ್ದಾರೆ.
ಜತೆಗೆ ಮೃತಪಟ್ಟವರ ಕುಟುಂಬಗಳಿಗೆ ಪರಿಹಾರವನ್ನು ಘೋಷಿಸಿದ್ದಾರೆ.
