ಲಕನೌ: ಉತ್ತರ ಪ್ರದೇಶದ ಲಖನೌದ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು,15 ವಿದ್ಯಾರ್ಥಿಗಳು ಅಗ್ನಿಗಾಹುತಿಯಾಗಿದ್ದಾರೆ.
ಲಖನೌದ ಅಲಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಉಷಾ ಮೆಹ್ತಾ ಮಾರ್ಗದಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಸೋಮವಾರ ಮಧ್ಯಾಹ್ನ ಅಗ್ನಿ ದುರಂತ ಸಂಭವಿಸಿದ್ದು,ಕೋಚಿಂಗ್ ಸೆಂಟರ್ ನಲ್ಲಿ ಈ ಅವಘಡ ಸಂಭವಿಸಿದೆ.
15 ವಿದ್ಯಾರ್ಥಿಗಳು ಸಜೀವ ದಹನವಾದರೆ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಲಖನೌದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದ ಸುದ್ದಿ ತಿಳಿದು ಬಹಳ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಕೂಡಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬೆಂಕಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 50,000 ಆರ್ಥಿಕ ನೆರವು ನೀಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಘಟನೆ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದು,ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.
