ಲಂಡನ್: ಪಕ್ಷದೊಳಗಿನ ಭಾರಿ ಒತ್ತಡಕ್ಕೆ ಮಣಿದು ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ರಾಜೀನಾಮೆ ನೀಡಿದ್ದಾರೆ.
ಅಧಿಕಾರ ವಹಿಸಿಕೊಂಡ ಎರಡೇ ವರ್ಷಗಳಲ್ಲಿ ಅವಧಿಗೂ ಮುನ್ನ ಕೀರ್ ಸ್ಟಾರ್ಮರ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಆಡಳಿತಾರೂಢ ಲೇಬರ್ ಪಕ್ಷದೊಳಗೆ ಸ್ಟಾರ್ಮರ್ ನಾಯಕತ್ವದ ವಿರುದ್ಧ ಅಸಮಾಧಾನ ಸ್ಫೋಟಗೊಂಡಿದ್ದು, ತೀವ್ರ ರಾಜಕೀಯ ಒತ್ತಡದಿಂದಾಗಿ ಅವರು ರಾಜೀನಾಮೆ ನೀಡುವುದಾಗಿ ಪ್ರಕಟಿಸಿದರು.
ಹೊಸ ಲೇಬರ್ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಜುಲೈನಲ್ಲಿ ಪ್ರಾರಂಭಿಸಲಾಗುವುದು ಮತ್ತು ಸೆಪ್ಟೆಂಬರ್ನಲ್ಲಿ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವವರೆಗೆ ತಾವು ಪ್ರಧಾನಿಯಾಗಿ ಮುಂದುವರೆಯುವುದಾಗಿ ಸ್ಟಾರ್ಮರ್ ತಿಳಿಸಿದ್ದಾರೆ.
ಜುಲೈ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಲೇಬರ್ ಪಕ್ಷವನ್ನು ಭರ್ಜರಿ ಗೆಲುವಿನತ್ತ ಮುನ್ನಡೆಸಿದ್ದ ಸ್ಟಾರ್ಮರ್, 14 ವರ್ಷಗಳ ಕನ್ಸರ್ವೇಟಿವ್ ಆಡಳಿತವನ್ನು ಕೊನೆಗೊಳಿಸಿದದ್ದರು. ಆದರೆ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಲೇಬರ್ ಪಕ್ಷವು ಭಾರಿ ಸೋಲನ್ನು ಅನುಭವಿಸಿತ್ತು.
ಕಳೆದ ವಾರ ನಡೆದ ಸಂಸತ್ ಉಪಚುನಾವಣೆಯಲ್ಲಿ ಗೆದ್ದ ಆಂಡಿ ಬರ್ನ್ಹ್ಯಾಮ್ ಅವರು ಮುಂದಿನ ಪ್ರಧಾನಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
