(ವರದಿ:ಸಿದ್ದರಾಜು,ಕೊಳ್ಳೇಗಾಲ)
ಕೊಳ್ಳೇಗಾಲ: ಚಾಮರಾಜನಗರ ಜಿಲ್ಲೆಯಲ್ಲಿ ಹೆದ್ದಾರಿಗಳು ಅಭಿವೃದ್ಧಿಯಾಗಿದ್ದು ವಾಹನ ಸವಾರರು ಅತಿವೇಗವಾಗಿ ಚಲಿಸಿ ಅಪಘಾತಕ್ಕೆ ಕಾರಣರಾಗುತ್ತಿದ್ದಾರೆ.
ಈ ಬಗ್ಗೆ ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು ಅವರು ಮಾತನಾಡಿದ್ದಾರೆ.
ಜಿಲ್ಲೆಯಲ್ಲಿ ಹಾದು ಹೋಗುವ ಚಾಮರಾಜನಗರ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹಾಗೂ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಹೆದ್ದಾರಿಗಳು ಅಭಿವೃದ್ಧಿಯಾಗಿವೆ, ವಾಹನ ಚಾಲಕರು ಅಡೆತಡೆ ಇಲ್ಲದೆ ಅತಿ ವೇಗವವಾಗಿ ವಾಹನಗಳನ್ನು ಚಲಾಯಿಸುತ್ತಿದ್ದಾರೆ ಹಾಗಾಗಿ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ ಎಂದು ಎಂ. ಮುತ್ತುರಾಜು ತಿಳಿಸಿದರು.
ತಾಲೂಕಿನ ಮಧುವನ ಹಳ್ಳಿ ಸಮೀಪ ಮಲೆ ಮಹದೇಶ್ವರ ಬೆಟ್ಟದಿಂದ ಹಿಂದಿರುಗುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದು ಇಬ್ಬರು ಸ್ಥಳದಲ್ಲಿ ಮೃತಪಟ್ಟು 45 ಮಂದಿ ಗಾಯಗೊಂಡ ಘಟನೆ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಗಳೊಡನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಉಪವಿಭಾಗ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳ ಯೋಗಕ್ಷಮ ವಿಚಾರಿಸಿ ವೈದ್ಯರಿಂದ ಮಾಹಿತಿ ಪಡೆದು ನಂತರ
ಸುದ್ದಿಗಾರರೊಂದಿಗೆ ಮಾತನಾಡಿದರು.
ಜಿಲ್ಲೆಯಲ್ಲಿ ಹಾದು ಹೋಗುವ ಚಾಮರಾಜನಗರ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಹಾಗೂ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಹೆದ್ದಾರಿಗಳ ನ್ನೇನೊ ಅಭಿವೃದ್ಧಿ ಮಾಡಿಲಾಗಿದೆ,ಆದರೆ ರಸ್ತೆ ನಿರ್ಮಾಣ ಕಾಮಗಾರಿ ವೇಳೆ ಹೆದ್ದಾರಿಗಳ ನಿಗದಿತ ಸ್ಥಳಗಳಲ್ಲಿ ಸೂಚನಾ ಫಲಗಳನ್ನು ಅಳವಡಿಸಿಲ್ಲ ಹಾಗೂ ತಿರುಗವುಳಲ್ಲಿ ವೈಟ್ ಟಾಪಿಂಗ್ ಸರಿಯಾಗಿ ಮಾಡಿಲ್ಲ. ಇದರಿಂದ ವಾಹನ ಸವಾರರು ಚಾಲನೆ ವೇಳೆ ಗೊಂದಲಕ್ಕೊಳಗಾಗಿ ನಿಯಂತ್ರಣ ಕಳೆದುಕೊಂಡು ಅಪಘಾತ ಎಸಗುತ್ತಿದ್ದಾರೆ ಎಂದು ತಿಳಿಸಿದರು.
ಈ ಹೆದ್ದಾರಿಗಳ ಉದ್ದಕ್ಕೂ ಅಲ್ಲಲ್ಲಿ ಅಪಘಾತ ವಲಯಗಳನ್ನು ಗುರುತಿಸಲಾಗಿದೆ. ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮವಹಿಸ ಲಾಗುತ್ತಿದೆ, ಈ ಬಗ್ಗೆ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಚರ್ಚಿಸಿ ಅಲ್ಲಲ್ಲಿ ಸೂಚನಾ ಫಲಕ ಅಳವಡಿಸಿ, ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮತ್ತು ಸುಗಮ ಸಂಚಾರಕ್ಕೆ ಅನುಕೂಲ ಮಾಡಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಅಪಘಾತದ ಬಗ್ಗೆ ಪ್ರತಿಕ್ರಿಸಿದ ಮುತ್ತುರಾಜ್, ಟೈಯರ್ ಸಿಡಿದು ಬಸ್ ಉರುಳಿದೆ ಎಂದು ಹೇಳಲಾಗುತ್ತಿದೆ,ಈ ಬಗ್ಗೆ ತನಿಖೆ ಮಾಡಲಾಗುವುದು ಎಂದು ಹೇಳಿದರು.
ಪಟ್ಟಣದಲ್ಲಿ ತಾತ್ಕಾಲಿಕವಾಗಿ ಸಂಚಾರ ಠಾಣೆಯನ್ನು ತೆರೆಯಲಾಗುವುದು ಈಗಾಗಲೇ ಅದನ್ನು ಚಾಲನೆಗೊಳಿಸಬೇಕಾಗಿತ್ತು. ಆದರೆ ಸ್ವಲ್ಪ ತಡವಾಗಿದೆ ಶೀಘ್ರದಲ್ಲಿ ಈ ಕಾರ್ಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇಲ್ಲಿನ ಕೆಲ ಸಿಬ್ಬಂದಿ ಸಂಚಾರಿ ಪೊಲೀಸರ ಸಮವಸ್ತ್ರ ಧರಿಸಿ ಪಟ್ಟಣದಲ್ಲಿ ಕಾರ್ಯನಿರ್ವಹಿಸುವರು, ಪಟ್ಟಣದ ಜನರಲ್ಲಿ ಸಂಚಾರಿ ನಿಯಮ ಪಾಲಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಎಸ್ಪಿ ಇದೇ ಸಂದರ್ಭದಲ್ಲಿ ತಿಳಿಸಿದರು
ಈ ವೇಳೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಡಿ ವೈ ಎಸ್ ಪಿ ಮೋಹನ್, ವೃತ್ತನಿರೀಕ್ಷಕ ರವೀಂದ್ರ, ಗ್ರಾಮಾಂತರ ಠಾಣೆ ಪಿಎಸ್ಐ ಸುಪ್ರೀತ್ ಹಾಜರಿದ್ದರು.
