ಮೈಸೂರು,ಜುಲೈ.1: ವಿಶ್ವ ವೈದ್ಯರ ದಿನಾಚರಣೆ ಅಂಗವಾಗಿ ಇಂದು ನಗರಪಾಲಿಕೆ ಮಾಜಿ ಸದಸ್ಯರಾದ ದಿ ಎನ್ ಸುನೀಲ್ ಕುಮಾರ್ ಅವರ ರಂಜಿತಾ ಸುನೀಲ್ ಕುಮಾರ್ ಅವರು ವೈದ್ಯಾಧಿಕಾರಿಗಳಿಗೆ ಸಸಿಗಳನ್ನು ಕೊಟ್ಟು ಶುಭ ಕೋರಿದರು.
ಯುವ ಮುಖಂಡರುಗಳಾದ ತೇಜಸ್ವಿ ನಾಗಲಿಂಗಸ್ವಾಮಿ ಮತ್ತು ಶ್ರೀಧರ್ ಅವರ ಜೊತೆಗೂಡಿ ರಾಮಾನುಜ ರಸ್ತೆಯಲ್ಲಿರುವ ಅಕ್ಕಮಣ್ಣಿ ಆಸ್ಪತ್ರೆಗೆ ತೆರಳಿ ಅಲ್ಲಿನ ವೈದ್ಯಾಧಿಕಾರಿಗಳಿಗೆ ಗಿಡ ನೀಡುವ ಮೂಲಕ ರಂಜಿತಾ ಅವರು ವೈದ್ಯರ ದಿನಾಚರಣೆ ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯುವ ಮುಖಂಡರಾದ ತೇಜಸ್ವಿ ನಾಗಲಿಂಗಸ್ವಾಮಿ,
ಪ್ರತಿ ವರ್ಷ ಜುಲೈ 1 ರಂದು ರಾಷ್ಟ್ರೀಯವೈದ್ಯರ ದಿನವನ್ನು ವೈದ್ಯರಿಗೆ ವಿಶೇಷ ಗೌರವ ನೀಡುವ ಸಲುವಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.
ಭಾರತದಲ್ಲಿ ಪಶ್ಚಿಮ ಬಂಗಾಳದ ಮೊದಲ ಮುಖ್ಯಮಂತ್ರಿ ಮತ್ತು ವೈದ್ಯ ಡಾ. ಬಿಧಾನ್ ಚಂದ್ರ ರಾಯ್ ಅವರ ಸ್ಮರಣಾರ್ಥ 1991 ಜುಲೈ 1 ರಲ್ಲಿ ಮೊದಲ ಬಾರಿ ವೈದ್ಯರ ದಿನವನ್ನು ಆಚರಿಸಲಾಯಿತು ಎಂದು ತಿಳಿಸಿದರು.
ನಮ್ಮ ವಾರ್ಡಿನ ವ್ಯಾಪ್ತಿಯಲ್ಲಿ ಬರುವ ಈ ಆಸ್ಪತ್ರೆಯ ವೈದ್ಯಾಧಿಕಾರಿಗಳಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ನಿಮಗೆ ಧನ್ಯವಾದ,ಈ ಆಸ್ಪತ್ರೆಯ ಅಭಿವೃದ್ಧಿ ಕುರಿತು ಸದಾ ನಿಮ್ಮೊಂದಿಗೆ ಇರುತ್ತವೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಹೇಳಿದರು.
