ಮೈಸೂರು: ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಹುಣಸೂರು ತಾಲೂಕು ಗಾವಡಗೆರೆ ಹೋಬಳಿ ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಜಾಬಗೆರೆ ಸುರೇಶ್ ವಿಶ್ವಕರ್ಮ ಅವರು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿಯನ್ನು ಸನ್ಮಾನಿಸಿ ಶುಭ ಕೋರಿದರು.
ಜಾಬಗೆರೆ ಗ್ರಾಮದಲ್ಲಿರುವ ಸರ್ಕಾರಿ ಆಸ್ಪತ್ರೆಗೆ ತೆರಳಿ ಸುರೇಶ್ ಅವರು ವೈದ್ಯಾಧಿಕಾರಿಗಳಿಗೆ ಸನ್ಮಾನಿಸಿ,ವೈದ್ಯರ ದಿನಾಚರಣೆ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸುರೇಶ್ ವಿಶ್ವಕರ್ಮ ಅವರು ವೈದ್ಯರ ನಿಸ್ವಾರ್ಥ ಸೇವೆಯನ್ನು ಶ್ಲಾಘಿಸಿದರು.ಆಸ್ಪತ್ರೆಯ ಅಭಿವೃದ್ಧಿಗೆ ಸಹಕರಿಸುವುದಾಗಿ ಸುರೇಶ್ ವಿಶ್ವಕರ್ಮ ತಿಳಿಸಿದರು.
