ಮೈಸೂರು: ಕೆ ಎಮ್ ಪಿ ಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜುಲೈ 3ರಂದು ಚಿನ್ನದ ಪದಕ ವಿಜೇತ ಜಮ್ಮಡ ಪ್ರೀತ್ ಅಪ್ಪಯ್ಯ ಅವರನ್ನು ಅಭಿನಂದಿಸಲಾಗುತ್ತಿದೆ.
ಇತ್ತೀಚಿಗೆ ಬೆಂಗಳೂರು ವಿಶ್ವವಿದ್ಯಾಲಯದ ಶೂಟಿಂಗ್ ರೇಂಜ್ ನಲ್ಲಿ ಭಾರತೀಯ ಕ್ರೀಡಾ ಪ್ರಾಧಿಕಾರದ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ರೈಫಲ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ 14ನೇ ಕರ್ನಾಟಕ ರಾಜ್ಯ ಶೂಟಿಂಗ್ಸ್ ಸ್ಪರ್ಧೆ ಮತ್ತು ಚಾಂಪಿಯನ್ ಶಿಪ್ ನಲ್ಲಿ ಮೈಸೂರು ಬನ್ನಿಮಂಟಪದ ನಿವಾಸಿ ಹಾಗೂ ಮೈಸೂರು ಸ್ಪೋರ್ಟ್ಸ್ ಶೂಟಿಂಗ್ ಅಕಾಡೆಮಿಯ ಜಮ್ಮಡ ಪ್ರೀತ್ ಅಪ್ಪಯ್ಯ
ಅವರು ಎರಡು ಚಿನ್ನದ ಪದಕಗಳನ್ನು ಜಯಗಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನಾ ಸಮಾರಂಭವನ್ನು ಕೆಎಂಪಿಕೆ ಟ್ರಸ್ಟ್ ಹಮ್ಮಿಕೊಂಡಿದೆ.
ಚಾಮುಂಡಿಪುರಂನಲ್ಲಿರುವ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಜುಲೈ 3ರಂದು ಸಂಜೆ 5.30ಕ್ಕೆ
ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ತಿಳಿಸಿದ್ದಾರೆ.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ಪ್ರತಾಪ್ ಸಿಂಹ, ಮೂಡ ಮಾಜಿ ಅಧ್ಯಕ್ಷರಾದ ಎಚ್ ವಿ ರಾಜೀವ್, ಲಕ್ಷ್ಮಿಪುರಂ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ರವಿಶಂಕರ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಕೆ ಬಿ ಲಿಂಗರಾಜು, ಹಿರಿಯ ಸಮಾಜ ಸೇವಕರಾದ ರಘುರಾಮ್ ವಾಜಪಾಯಿ, ವಿಶೇಷ ಚೇತನ ಅಂತರಾಷ್ಟ್ರೀಯ ಕ್ರೀಡಾಪಟು ಅಲೋಕ್ ಜೈನ್ ಮತ್ತಿತರರು ಭಾಗವಹಿಸಲಿದ್ದಾರೆ.
