ಮೈಸೂರು: ನಗರದಲ್ಲಿ ಪ್ರಗತಿಯಲ್ಲಿರುವ ಮೇಲುಸೇತುವೆ ನಿರ್ಮಾಣ ಕಾಮಗಾರಿಯನ್ನು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಇಂದು ಪರಿಶೀಲಿಸಿದರು.
ಈ ವೇಳೆ ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಅನುಷ್ಠಾನದ ವಿವಿಧ ಅಂಶಗಳ ಕುರಿತು ಅಧಿಕಾರಿಗಳೊಂದಿಗೆ ಸಮಗ್ರ ಚರ್ಚೆ ನಡೆಸಿ, ಕಾಮಗಾರಿಯನ್ನು ನಿಗದಿತ ಕಾಲಮಿತಿಯೊಳಗೆ ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಕಾಮಗಾರಿ ನಡೆಯುವ ಅವಧಿಯಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಸಂಚಾರ ತೊಂದರೆ ಅಥವಾ ಅನಾನುಕೂಲ ವಾಗದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಸುರಕ್ಷತೆ ಮತ್ತು ಸುಗಮ ಸಂಚಾರ ನಿರ್ವಹಣೆಗೆ ಆದ್ಯತೆ ನೀಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪರಿಶೀಲನೆ ವೇಳಡ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.
