ಬೆಂಗಳೂರು: ಶ್ರೀ ಭಗೀರಥ ಪೀಠದ ಪೂಜ್ಯ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಇಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ಈ ವೇಳೆ ಸ್ವಾಮೀಜಿಗಳು ಉಪ್ಪಾರ ಸಮಾಜದ ಅಭಿವೃದ್ಧಿ, ಸಮುದಾಯದ ಸಾಮಾಜಿಕ ಹಾಗೂ ಶೈಕ್ಷಣಿಕ ಸಬಲೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಸಮಾಜದ ಸಮುದಾಯದ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ವಿಷಯಗಳು ಹಾಗೂ ಜನಪರ ಯೋಜನೆಗಳ ಕುರಿತು ಮಹಾಸ್ವಾಮಿಗಳು ಸಚಿವರೊಂದಿಗೆ ಅಭಿಪ್ರಾಯ ವಿನಿಮಯ ಮಾಡಿದರು.
