ಮೈಸೂರು: ಮೈಸೂರು ನಗರ ಜನತಾದಳ (ಜಾತ್ಯಾತೀತ) ಪಕ್ಷದ ಉಪಾಧ್ಯಕ್ಷರಾಗಿ ಗವಿಮಠದ ನಿವಾಸಿ ಯದುನಂದನ್ .ಜಿ ಅವರನ್ನು ನೇಮಕ ಮಾಡಲಾಗಿದೆ.
ಜೆಡಿಎಸ್ ನಗರಾಧ್ಯಕ್ಷ ಎಸ್ ಬಿ ಎಂ ಮಂಜು ಅವರು ಯದುನಂದನ್ ಅವರಿಗೆ ನೇಮಕಾತಿ ಪತ್ರ ನೀಡಿದ್ದು,ಜೆಡಿಎಸ್ ಪಕ್ಷದ ಸಿದ್ದಾಂತಗಳಿಗೆ ಬದ್ದರಾಗಿ,
ಮುಖಂಡರು,ಕಾರ್ಯಕರ್ತ ರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಗರದಲ್ಲಿ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ ಬಲವರ್ಧನೆಗೊಳಿಸುವಂತೆ ಸಲಹೆ ನೀಡಿದ್ದಾರೆ.
