ರಾಜೌರಿ: ಭಾನುವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ರಾಜೌರಿ ಜಿಲ್ಲೆಗಳಲ್ಲಿ ಸಂಭವಿಸಿದ ಹಠಾತ್ ಪ್ರವಾಹ ಮತ್ತು ಮೇಘಸ್ಫೋಟದಿಂದಾಗಿ ಪಿರ್ ಪಂಜಾಲ್ ಪ್ರದೇಶದ ವಸತಿ ಪ್ರದೇಶಗಳು ಜಲಾವೃತಗೊಂಡು 11 ಮಂದಿ ಮೃತರಾಗಿದ್ದಾರೆ.
ಧಾರಾಕಾರ ಮಳೆಯಿಂದಾಗಿ ಅವಳಿ ಗಡಿ ಜಿಲ್ಲೆಗಳಲ್ಲಿ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದೆ, ಪೂಂಚ್ ಜಿಲ್ಲೆಯ ಸುರಂಕೋಟ್ ತಹಸಿಲ್ ನಲ್ಲಿ ಹೆಚ್ಚಿನ ಸಾವುನೋವುಗಳು ಸಂಭವಿಸಿವೆ, ಹಲವರು ಕಾಣೆಯಾಗಿದ್ದಾರೆ.
ಮಳೆ ಮತ್ತು ಪ್ರವಾಹ ಪೀಡಿತ ಜಿಲ್ಲೆಗಳ ಪರಿಸ್ಥಿತಿಯನ್ನು ಪರಿಶೀಲಿಸಿದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸಂತ್ರಸ್ತ ಕುಟುಂಬಗಳಿಗೆ ತಕ್ಷಣದ ಪರಿಹಾರ ಮತ್ತು ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸುರಂಕೋಟೆಯ ಲೋವರ್ ಮುರ್ರಾ ಗ್ರಾಮದಲ್ಲಿ ಭಾನುವಾರ ಮುಂಜಾನೆ ಧಾರಾಕಾರ ಮಳೆಯಿಂದ ಉಂಟಾದ ಭೂಕುಸಿತದಿಂದ ಮನೆ ಕುಸಿದು ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೂನಬಂದಿ ಗ್ರಾಮದಲ್ಲಿ ಮನೆ ಕುಸಿದು 28 ವರ್ಷದ ಮಹಿಳೆ,ಸಾಂಗ್ಲಾನಿ-
ಸುರಂಕೋಟೆಯಲ್ಲಿ ಮನೆ ಕುಸಿದು ಯುವಕ ಸಾವನ್ನಪ್ಪಿದರೆ, ಮರ್ಹೋಟೆಯಲ್ಲಿ ಅಪ್ರಾಪ್ತ ಬಾಲಕಿ ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.
ಪೂಂಚ್ ಜಿಲ್ಲೆಯ ಹವೇಲಿ ತಹಸಿಲ್ನಲ್ಲಿ ಸುಮಾರು ಅರ್ಧ ಡಜನ್ ಮನೆಗಳು ಕುಸಿದು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಶನಿವಾರ ರಾತ್ರಿಯಿಡೀ ನಿರಂತರ ಮಳೆಯ ನಂತರ ಉಂಟಾದ ಹಠಾತ್ ಪ್ರವಾಹದಿಂದಾಗಿ ತಗ್ಗು ಪ್ರದೇಶಗಳು ಪ್ರವಾಹಕ್ಕೆ ಸಿಲುಕಿದ್ದರಿಂದ ನೂರಾರು ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ರಾಜೌರಿ ಜಿಲ್ಲೆಯ ಬೇಲಾ ಕಾಲೋನಿಯಲ್ಲಿ ಭಾರೀ ಮಳೆ,ಹಠಾತ್ ಪ್ರವಾಹ ಮತ್ತು ಮೇಘಸ್ಫೋಟದಿಂದಾಗಿ ಕಾರುಗಳು, ಆಸ್ತಿಪಾಸ್ತಿ ಮತ್ತು ಇತರ ಮೂಲಸೌಕರ್ಯಗಳು ಕೊಚ್ಚಿ ಹೋಗಿವೆ.
