ಬೆಂಗಳೂರು: ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕ ಘಟಕದಿಂದ ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷರು ಹಾಗೂ ಭಾರತ ಸರ್ಕಾರದ ಐಸಿಸಿಆರ್ ಸದಸ್ಯರಾದ ಡಾ. ಜಾನಪದ ಎಸ್. ಬಾಲಾಜಿ ಅವರಿಗೆ ‘ಹಿಂದೂ ಮಹಾನ್ ಪ್ರಶಸ್ತಿ’ ಪ್ರದಾನ ಮಾಡಲಾಯಿತು.
ನಗರದ ಮಲ್ಲೇಶ್ವರಂ ಕಾವೇರಿ ರಜತ ಭವನದಲ್ಲಿ ಆಯೋಜಿಸಿದ್ದ ಐದನೇ ವರ್ಷದ ಗುರುವಂದನ ಕಾರ್ಯಕ್ರಮದಲ್ಲಿ ಡಾ. ಜಾನಪದ ಎಸ್. ಬಾಲಾಜಿ ಅವರಿಗೆ ಶ್ರೀರಾಮ ಸೇನೆಯ ಸಂಸ್ಥಾಪಕರಾದ ಪ್ರಮೋದ್ ಮುತಾಲಿಕ್ ಅವರುಹಿಂದೂ ಮಹಾನ್ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕ ರಾಜ್ಯಾಧ್ಯಕ್ಷರಾದ ಡಾ. ಮನೋಜ್ ಆಲುಂಗಾರ್, ಪತಾಂಜಲಿ ಯೋಗ ತಜ್ಞರಾದ ಶ್ರೀ ಪ್ರಕಾಶ್ ಯೋಗಿ ಗುರೂಜಿ, ರಾಷ್ಟ್ರೀಯ ಯುವ ಸಭಾ ಸಂಚಾಲಕರಾದ ಸುಭಾಷ್ ಕೆ. ಆರ್, ಮಹಿಳಾ ರಾಜ್ಯಾಧ್ಯಕ್ಷೆ ರಂಜಿತ ಎನ್, ಹಿಂದೂ ಜನಜಾಗೃತಿ ವೇದಿಕೆಯ ಕರ್ನಾಟಕ ಸಂಯೋಜಕರಾದ ಮೋಹನ್ ಗೌಡ, ರಾಜ್ಯ ರೈತ ಕಲ್ಯಾಣ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ವೀರ ಪುತ್ರ ಶ್ರೀ ಚಂದನ್ ಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಡಾ. ಜಾನಪದ ಎಸ್. ಬಾಲಾಜಿ ಅವರು ಜಾನಪದ ಕ್ಷೇತ್ರದಲ್ಲಿ ಸಲ್ಲಿಸಿರುವ ಅನನ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರ ನೇತೃತ್ವದಲ್ಲಿ ಕನ್ನಡ ಜಾನಪದ ಪರಿಷತ್ ರಾಜ್ಯಾದ್ಯಂತ ಜನಪದ ಸಂಸ್ಕೃತಿಯ ಸಂರಕ್ಷಣೆ ಹಾಗೂ ಪ್ರಚಾರಕ್ಕಾಗಿ ಹಲವು ಮಹತ್ವದ ಕಾರ್ಯಗಳನ್ನು ನಿರ್ವಹಿಸುತ್ತಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಡಾ. ಬಾಲಾಜಿ ಅವರ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸೇವೆಯನ್ನು ಶ್ಲಾಘಿಸಿದರು.
