ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ನೇರ ಫೋನ್ ಇನ್ ಕಾರ್ಯಕ್ರಮವನ್ನು ನಾಳೆ ಬೆಳಿಗ್ಗೆ ೧೧ ರಿಂದ ೧೨ ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇತರೆ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಸಾರ್ವಜನಿಕರು ಜುಲೈ ೨೩ರಂದು ಬೆಳಿಗ್ಗೆ ೧೧ ರಿಂದ ೧೨ ಗಂಟೆಯವರೆಗೆ ದೂರವಾಣಿ ಸಂಖ್ಯೆ ೦೮೨೨೬-೨೨೩೧೬೩ ಗೆ ಕರೆ ಮಾಡಿ ತಮ್ಮ ಕುಂದು ಕೊರತೆಗಳನ್ನು ತಿಳಿಸಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.
