ಮೈಸೂರು: ಬ್ಯಾಂಗಲ್ ಸ್ಟೋರ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಸುಮಾರು 2 ಲಕ್ಷ ಮೌಲ್ಯದ ಪದಾರ್ಥ ನಾಶವಾದ ಘಟನೆ ಜಿಲ್ಲೆಯ ನಂಜನಗೂಡಿನ ಆರ್.ಪಿ.ರಸ್ತೆಯಲ್ಲಿ ನಡೆದಿದೆ.
ರವಿ ಕುಮಾರ್ ಅವರಿಗೆ ಸೇರಿದ ಬ್ಯಾಂಗಲ್ ಸ್ಟೋರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ಬೆಲೆಯ ಪದಾರ್ಥಗಳು ಸುಟ್ಟು ಕರಕಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ
ಬೆಂಕಿ ನಂದಿಸಿದ್ದು,
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಆದರೆ ಬೆಂಕಿ ಹೊತ್ತಿಕೊಳ್ಳಲು ಕಾರಣ ತಿಳಿದು ಬಂದಿಲ್ಲ.
