ಬೆಂಗಳೂರು: ಮೈಸೂರು ನಗರವನ್ನು ಮುಂದಿನ ಪೀಳಿಗೆಗೆ ಸೂಕ್ತ, ಸಮೃದ್ಧ, ಸ್ವಾವಲಂಬಿ, ಆಧುನಿಕ, ಸುಸ್ಥಿರ ಹಾಗೂ ಸುಸಜ್ಜಿತ ವಿಶ್ವಮಟ್ಟದ ನಗರವನ್ನಾಗಿ ನಿರ್ಮಿಸುವ ಮಹತ್ವಾಕಾಂಕ್ಷಿ ಉದ್ದೇಶಿತ ಸಮಗ್ರ ಯೋಜನಾ ನಕ್ಷೆಯನ್ನು ಸಿದ್ಧಪಡಿಸಲಾಗಿದೆ.
ಈ ಬೃಹತ್ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿಯ ಕುರಿತು ಇಂದು ವಿಧಾನಸೌಧದ ಉಪಸಮಿತಿ ಕೊಠಡಿಯಲ್ಲಿ ಸಭೆಯಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಮಾಹಿತಿ ಪಡೆದರು.
ಈ ಯೋಜನೆಯನ್ನು ಮುಂಚೂಣಿಗೆ ತರಲು ಉದ್ಯಮ, ನಿಪುಣ, ಸುಖವಾಸಿ, ಪ್ರವಾಸೋದ್ಯಮ ಮತ್ತು ಸಂಚಾರ ಮೈಸೂರು ಎಂಬ ಐದು ಪ್ರಮುಖ ಕ್ಷೇತ್ರಗಳ ಮೇಲೆ ಗಮನಹರಿಸಿ ಕಾರ್ಯರೂಪಕ್ಕೆ ತರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಕರ್ನಾಟಕ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಬಿ. ಬಿ. ಕಾವೇರಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
