ಮೈಸೂರು: ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ದೈಹಿಕ ಶಿಕ್ಷಣ ವಿಭಾಗವು ಐ ಕ್ಯೂ ಎ ಸಿ ಸಹಯೋಗದೊಂದಿಗೆ ವಿದ್ಯಾರ್ಥಿನಿಯರಿಗೆ ಮಹಿಳೆಯರ ಸ್ವಯಂ ರಕ್ಷಣಾ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾಲೇಜಿನ ಅವರಣದಲ್ಲಿ ಆಯೋಜಿಸಿದ್ದ
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಲೀಲಾವತಿ ಎನ್.ಕೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಯಾವುದಾದರೂ ಒಂದು ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಲೇಬೇಕು ಎಂದು ಸಲಹೆ ನೀಡಿದ ಅವರು ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಅಂತರರಾಷ್ಟ್ರೀಯ ಕರಾಟೆ ಪಟು ಹಾಗೂ ಅಂತರರಾಷ್ಟ್ರೀಯ ತೀರ್ಪುಗಾರರು ಭಾರತಿ ಆನಂದ್ ಮತ್ತು ರಾಷ್ಟ್ರೀಯ ಕ್ರೀಡಾಪಟು ಮತ್ತು ತೀರ್ಪುಗಾರರಾದ
ಶ್ರೇಯಸ್ ಕುಮಾರ್ ಅವರು ವಿದ್ಯಾರ್ಥಿಗಳಿಗೆ ಆತ್ಮ ರಕ್ಷಣೆಯ ಕೌಶಲ್ಯಗಳ ಬಗ್ಗೆ ತರಬೇತಿ ನೀಡಿದರು.
ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕಿ ಪ್ರತಿಮಾ ಕೆ. ಅವರು ವಿದ್ಯಾರ್ಥಿಗಳಿಗೆ ಈ ತರಬೇತಿಯು ಅತ್ಯಂತ ಉಪಯುಕ್ತವಾಗಿದ್ದು, ವಿದ್ಯಾರ್ಥಿಗಳು ಇದರ ಉಪಯೋಗ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಐ. ಕ್ಯೂ. ಎ. ಸಿ ಸಹ ಸಂಚಾಲಕ ಡಾ. ಚೇತನ್ ಮಲಗಾವಿ, ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ದೈಹಿಕ ಶಿಕ್ಷಣ ವಿಭಾಗ ಹಮ್ಮಿಕೊಂಡಿದ್ದ
