ಬಾಗಲಕೋಟ: ಬಾಗಿನ ಅರ್ಪಣೆ ಜಲ ಜಾನಪದದ ಒಂದು ಪ್ರಮುಖ ಅಂಶವಾಗಿದೆ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್ ಬಾಲಾಜಿ ತಿಳಿಸಿದರು.
ಜಿಲ್ಲೆಯ ಸೀಮಿಕೆರೆಯ ಅಯ್ಯನಕೆರೆಯಲ್ಲಿ ಕನ್ನಡ ಜಾನಪದ ಪರಿಷತ್ ಬಾಗಲಕೋಟೆ ಜಿಲ್ಲಾ ಹಾಗೂ ತಾಲೂಕು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಬಾಗಿನ ಅರ್ಪಣೆ
ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಲ ದೇವತೆಗೆ ಬಾಗಿನ ಅರ್ಪಿಸುವುದು ನಮ್ಮ ಪುರಾತನ ಸಂಪ್ರದಾಯವಾಗಿದ್ದು, ರಾಜ ಮಹಾರಾಜರ ಕಾಲದಿಂದಲೂ ಇದು ಪರಂಪರೆಯಾಗಿ ನಡೆದುಕೊಂಡು ಬಂದಿದೆ ಎಂದು ತಿಳಿಸಿದರು.
ಜಲ ಜಾನಪದದ ಮಹತ್ವವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡ ಜಾನಪದ ಪರಿಷತ್ ವಿಶೇಷ ಕಾಳಜಿ ವಹಿಸಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೆಚ್ಚಿನ ಬಾಗಿನ ಅರ್ಪಣೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಿಎಂ ಸೌಕಾರ್ ಮಾತನಾಡಿ, “ಕಳೆದ ವರ್ಷದಂತೆ ಈ ಸಾಲಿನಲ್ಲಿಯೂ ಬಾಗಲಕೋಟ ಜಿಲ್ಲೆಯಲ್ಲಿ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜಲ ಜಾಗೃತಿ ಕುರಿತಾಗಿ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಸಾಂಸ್ಕೃತಿಕ ಕನ್ನಡ ಪರಿಚಾರಕ ಜಿ.ಕೆ. ತಳವಾರ್ ಮಾತನಾಡಿ, ಅಯ್ಯನಕೆರೆ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಗಮನ ಹರಿಸಬೇಕು. ಕೆರೆ ಒತ್ತುವರಿಯನು ತೆರವುಗೊಳಿಸಲು ಜಿಲ್ಲಾಡಳಿತ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಬಾಗಲಕೋಟ ತಾಲೂಕು ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಡಾ. ಬಸವರಾಜ್ ಕುಂಬಾರ, ನಿಕಟ ಪೂರ್ವ ಅಧ್ಯಕ್ಷ ಕಟಗಿ, ಮಹದೇವಪ್ಪ ತಳವಾರ, ಸಿದ್ದಪ್ಪ ಹರಕೇರಿ, ಹಿರಪ್ಪ ಕಾವಲಿ, ಶಿವಪ್ಪ ನಾಯಕ, ಜಿಲ್ಲಾ ಕಜಾಪ ಕಾರ್ಯದರ್ಶಿ ನಭಿ ವಾಲಿ, ಸತೀಶ್ ನಾಯಕ ಸೇರಿದಂತೆ ಹಲವರು ಉಪಸ್ಥಿತರಿದ್ದರು.
