ಮೈಸೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು.
ಶಿಕ್ಷಣ ಕ್ಷೇತ್ರಕ್ಕೆ ಹೆಸರುವಾಸಿಯಾದ ಸುತ್ತೂರು ಗ್ರಾಮದ ಸುತ್ತೂರು ಮಠಕ್ಕೆ ಸಚಿವರು ಭೇಟಿ ನೀಡಿ,ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ. ಯತೀಂದ್ರ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ತಮ್ಮ ಸ್ವಕ್ಷೇತ್ರದಲ್ಲಿ ಇರುವ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್, ಹಿಂದುಳಿದ ವರ್ಗಗಳ ಮುಖಂಡ ಶಿವರಾಮು, ತೊರೆಮಾವು ಟಿ.ಡಿ. ಗಿರೀಶ್, ಹುಳಿಮಾವು ನಟರಾಜು, ಕುಮಾರ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
