ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 79ನೇ ಹುಟ್ಟು ಹಬ್ಬದ ಅಂಗವಾಗಿ ಅಗ್ರಹಾರದ 1೦1 ಗಣಪತಿ ದೇವಸ್ಥಾನದಲ್ಲಿ ಅವರ ಹೆಸರಿನಲ್ಲಿ ಅಭಿಮಾನಿಗಳು ವಿಶೇಷ ಅರ್ಚನೆ ಮಾಡಿಸಿದರು.
ನಂತರ ಸಾರ್ವಜನಿಕರಿಗೆ ಸಿಹಿ ವಿತರಿಸಿ
ನೆಚ್ಚಿನ ನಾಯಕನಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಕೆ ಆರ್ ಬ್ಯಾಂಕ್ ಅಧ್ಯಕ್ಷರಾದ ಬಸವರಾಜ್ ಬಸಪ್ಪ, ಡೈರಿ ವೆಂಕಟೇಶ್, ರಮೇಶ್ ರಾಮಪ್ಪ, ವಿಶ್ವ, ರವಿಚಂದ್ರ, ಎಸ್ ಎನ್ ರಾಜೇಶ್, ಕೃಷ್ಣಪ್ಪ (ಗಂಟಯ್ಯ),ಲೋಕೇಶ್, ಮೋಹನ್, ಕಡಕೋಳ ಶಿವು,ಫ್ರಾನ್ಸಿಸ್, ದಿನೇಶ್, ಕೇಶವ,
ಮತ್ತಿತರರು 101 ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.
