ಚಿತ್ರದುರ್ಗ: ಲಾರಿ ಚಾಲಕ ಎರಡು ಕಾರುಗಳಿಗೆ ಸರಣಿ ಅಪಘಾತ ಮಾಡಿದ ಪರಿಣಾಮ ಇಬ್ಬರು ಕಾರು ಚಾಲಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ
ಚಿತ್ರದುರ್ಗದಲ್ಲಿ ನಡೆದಿದೆ.
ಹೊಸಕೋಟೆ ಮೂಲದ ಗೋಪಿ(44) ಹಾಗೂ ಕೆಆರ್ ಪೇಟೆ ಮೂಲದ ಪವನ್( 23) ಮೃತ ಕಾರು ಚಾಲಕರು.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಂಜುನಾಥ ಎಂಬುವರಿಗೆ ಗಂಭೀರ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ರಾತ್ರಿ ದೊಡ್ಡ ಸಿದ್ದವನಹಳ್ಳಿಗೆ ಹಾದು ಹೋಗುವ ಬ್ರಿಡ್ಜ್ ಸಮೀಪ ಎನ್ಹೆಚ್ 48 ರಲ್ಲಿ ಬೆಂಗಳೂರಿಂದ ದಾವಣಗೆರೆ ಮಾರ್ಗವಾಗಿ ಚಲಿಸುತ್ತಿದ್ದ ಎರಡು ಕಾರುಗಳಿಗೆ ಹಿಂದಿನಿಂದ ಅತಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.
ಅಪಘಾತ ಸಂಬಂಧ ಪ್ರಕರಣ ದಾಖಲಿಸಿ ಲಾರಿ ಚಾಲಕನಕ್ಕೆ ಕ್ರಮ ಕೈಗೊಂಡಿದ್ದಾರೆ.
