ಹುಣಸೂರು: ಹುಣಸೂರು ತಾಲೂಕು ಹೊನ್ನಿಕುಪ್ಪೆ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳ ಜೊತೆಗೂಡಿ ಇಡೀ ಗ್ರಾಮದ ಜನತೆ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಸಂಭ್ರಮ,ಸಡಗರದಿಂದ ಆಚರಿಸಿದರು.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಮತ್ತು ಗ್ರಾಮಸ್ಥರು ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ಅವರ ನೇತೃತ್ವದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಡಾ.ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಭಾರತದ ರಾಷ್ಟ್ರಧ್ವಜವನ್ನು ಹಿಡಿದು ಗ್ರಾಮದ ರಸ್ತೆಗಳಲ್ಲಿ ಮೆರವಣಿಗೆ ಮಾಡಿದುದು ವಿಶೇಷವಾಗಿತ್ತು.
ನಂತರ ಶಾಲಾ ಆವರಣದಲ್ಲಿ ಮಕ್ಕಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ದೇಶ ಭಕ್ತಿಗೀತೆಗಳು ಎಲ್ಲರ ಮನಸೂರೆಗೊಂಡಿತು.
ಕಾರ್ಯಕ್ರಮದ ನಂತರ ಶಾಲಾ ಮಕ್ಕಳು ಸೇರಿದಂತೆ ಇಡೀ ಗ್ರಾಮದ ಜನತೆಗೆ ಊಟದ ವ್ಯವಸ್ಥೆ ಮಾಡಿದ್ದು ಕೂಡ ಅರ್ಥಪೂರ್ಣವಾಗಿತ್ತು.
ಯಾವುದೇ ಪ್ರಸಿದ್ಧ ಖಾಸಗಿ ಶಾಲೆಗಳಿಗೂ ಸೆಡ್ಡು ಹೊಡೆಯುವಂತೆ ಹೊನ್ನಿ ಕುಪ್ಪೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ದೇಶಭಕ್ತಿ ಗೀತೆ ಹಾಡಿ ಎಲ್ಲರ ಮನಸೂರೆ ಗೊಂಡಿದ್ದಾರೆ. ಮಕ್ಕಳಿಗೆ ತಿದ್ದಿ ಬುದ್ದಿ ಹೇಳಿ ಅಕ್ಷರ ಕಲಿಸುವ ಈ ಶಾಲೆಯ ಶಿಕ್ಷಕರಿಗೆ ನಿಜಕ್ಕೂ ಒಂದು ಸಲಾಂ.
