ಮೈಸೂರು ಮೈಸೂರಿನ ರಾಮಾನುಜ ರಸ್ತೆಯಲ್ಲಿನ ಶ್ರೀ ಶಿವರಾತ್ರೀಶ್ವರ ಅಟೋ ಮಾಲಿಕರ ಮತ್ತು ಚಾಲಕರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮದ ವೇಳೆ ಮೈಸೂರಿನ ರಾಮಾನುಜ ರಸ್ತೆ ನಿವಾಸಿ ಪ್ರವೀಣ್ ಶೆಟ್ಟಿ ಅವರ ಪುತ್ರಿ ಖ್ಯಾತ ಯುವ ಕ್ರೀಡಾಪಟು ಪೃಥ್ವಿ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಪೃತ್ವಿ ಶೆಟ್ಟಿ ತ್ರೋಬಾಲ್ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಚಾಂಪಿಯನ್ ಶಿಪ್ ನಲ್ಲಿ ವಿಜೇತರಾಗಿದ್ದಾರೆ.ಅವರನ್ನು ಮಾಜಿ ಶಾಸಕರಾದ ಎಂ ಕೆ ಸೋಮಶೇಖರ್ ಅವರು ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಜನರಿಗಾಗಿ ಸೇವಾ ಸಮಿತಿ ಅಧ್ಯಕ್ಷ ಮಹೇಶ್ ಕುಮಾರ್, ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ,ನಗರಪಾಲಿಕೆ ಮಾಜಿ ಸದಸ್ಯರಾದ ಪಾರ್ಥಸಾರಥಿ, ಸಮಾಜ ಸೇವಕರಾದ ಪ್ರವೀಣ್ ಶೆಟ್ಟಿ, ಗೋಲ್ಡ್ ಸುರೇಶ್, ಗುಣಶೇಖರ್ ಮತ್ತಿತರರು ಉಪಸ್ಥಿತರಿದ್ದರು.
